
ಆಸ್ಟ್ರೇಲಿಯಾ ಭಾರತದ ಪ್ರಮುಖ ಪಾಲುದಾರ ರಾಷ್ಟ್ರ: ಜೈ ಶಂಕರ್
Thursday, October 13, 2022
ಮೆಲ್ಬರ್ನ್: ಭದ್ರತೆ ಹಾಗೂ ಸ್ಥಿರತೆ ವಿಷಯದಲ್ಲಿ ಆಸ್ಟ್ರೇಲಿಯಾವು ಭಾರತದ ಪ್ರಮುಖ ಪಾಲುದಾರ ರಾಷ್ಟ್ರ ಎಂದು ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಹೇಳಿದರು.
ಎರಡು ದಿನಗಳ ಭೇಟಿಗಾಗಿ ಆಸ್ಟ್ರೇಲಿಯಾಗೆ ಬಂದಿರುವ ಜೈಶಂಕರ್ ಅವರು, ಇಲ್ಲಿನ ಭಾರತೀಯ ಸಮುದಾಯದ ಸದಸ್ಯರನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ, ‘ವಾಸ್ತವವಾಗಿ, ಭಾರತ – ಆಸ್ಟ್ರೇಲಿಯಾದ ಸಂಬಂಧದಲ್ಲಿ ದೊಡ್ಡ ಬದಲಾವಣೆಯಾಗಿದೆ. ಎರಡೂ ದೇಶಗಳು ಈಗ ಕ್ವಾಡ್‌ನ ಸದಸ್ಯ ರಾಷ್ಟ್ರಗಳಾಗಿವೆ. ಇಂಡೊ–ಪೆಸಿಫಿಕ್ ವಲಯದ ಭದ್ರತೆ ಹಾಗೂ ಸ್ಥಿರತೆಗಾಗಿ ಒಟ್ಟಾಗಿ ಕೆಲಸ ಮಾಡುತ್ತಿವೆ’ ಎಂದರು.