ಕುಂದಾಪುರ: ನಿರುಪಯುಕ್ತ ಬೃಹತ್ ಟ್ಯಾಂಕ್ ನೆಲಸಮ!
Thursday, October 13, 2022
ಉಡುಪಿ: ಹದಿನೈದು ವರ್ಷಗಳ ಹಳೆಯದಾದ ನಿರುಪಯುಕ್ತ ನೀರಿನ ಬೃಹತ್ ಟ್ಯಾಂಕ್‌ನ್ನು ಮಂಗಳವಾರ ಬೆಳಿಗ್ಗೆ ಕಾರ್ಯಾಚರಣೆ ನಡೆಸುವ ಮೂಲಕ ತೆರವುಗೊಳಿಸಲಾಯಿತು.
ಸತತ 9 ಗಂಟೆಗಳ ನಿರಂತರ ಕಾರ್ಯಾಚರಣೆಯೊಂದಿಗೆ ಟ್ಯಾಂಕ್ ನೆಲಕ್ಕುರುಳಿತು.
ಕೋಟೇಶ್ವರ ಗ್ರಾಪಂ ಎದುರಿನ ಗ್ರಾಮಲೆಕ್ಕಿಗರ ಕೊಠಡಿ ಹಿಂಭಾಗದಲ್ಲಿ ಈ ಬೃಹತ್ ನೀರಿನ ಟ್ಯಾಂಕ್ ಇದ್ದು, 1986ರಲ್ಲಿ ನಿರ್ಮಾಣವಾದ 2 ಲಕ್ಷ ಲೀಟರ್ ಸಂಗ್ರಹ ಸಾಮರ್ಥ್ಯದ ಟ್ಯಾಂಕ್‌ನಲ್ಲಿ ಸೋರಿಕೆ ಕಂಡು ಬಂದಿದ್ದರಿಂದ ಕಳೆದ ಹದಿನೈದು ವರ್ಷಗಳಿಂದ ಯಾವುದೇ ಉಪಯೋಗವೂ ಇಲ್ಲದೇ ಇದು ನಿರುಪಯುಕ್ತವಾಗಿತ್ತು.
ಕುಂದಾಪುರ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು, ಸಂಚಾರಿ ಠಾಣೆ, ಆರೋಗ್ಯ ಇಲಾಖೆ, ಮೆಸ್ಕಾಂ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಓವರ್ ಹೆಡ್ ಟ್ಯಾಂಕ್ ತೆರವು ಕಾರ್ಯಾಚರಣೆ ಸಾಂಗವಾಗಿ ನಡೆಯಿತು. ಟ್ಯಾಂಕರ್ ನೆಲಕ್ಕೆ ಉರುಳುವುದನ್ನು ನೋಡಲು ನೂರಾರು ಜನರು ನೆರೆದಿದ್ದರು.