
MANGALORE: ರಾಮಯ್ಯ ಗೌಡರ ಕಂಚಿನ ಪ್ರತಿಮೆ ವೀಕ್ಷಿಸಿದ ಆದಿಚುಂಚನಗಿರಿ ಡಾ. ನಿರ್ಮಲಾನಂದನಾಥ ಶ್ರೀ
Saturday, October 22, 2022
ಮಂಗಳೂರು: ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಯವರು ಇಂದು ಮಂಗಳೂರಿನ ಬಾವುಟ ಗುಡ್ಡೆಯಲ್ಲಿ ಲೋಕಾರ್ಪಣೆಗೆ ತಯಾರಾಗಿರುವ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆಯನ್ನು ಹಾಗು ಸ್ಥಳವನ್ನು ವೀಕ್ಷಿಸಿದರು. ಬಳಿಕ ಲೋಕಾರ್ಪಣೆ ಕಾರ್ಯಕ್ರಮದ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಕಾವೂರು ಆದಿಚುಂಚನಗಿರಿ ಮಠದ ಡಾ. ಧರ್ಮಪಾಲನಾಥ ಸ್ವಾಮೀಜಿ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ ಮತ್ತು ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.