-->
puttur: ಅಡಕೆ ಆಮದು ವಿಚಾರದಲ್ಲಿ ಕೇಂದ್ರ ಸರಕಾರ ವಿಮರ್ಶೆ ಮಾಡಲಿ: ಕಾವು ಹೇಮನಾಥ ಶೆಟ್ಟಿ

puttur: ಅಡಕೆ ಆಮದು ವಿಚಾರದಲ್ಲಿ ಕೇಂದ್ರ ಸರಕಾರ ವಿಮರ್ಶೆ ಮಾಡಲಿ: ಕಾವು ಹೇಮನಾಥ ಶೆಟ್ಟಿ




ಪುತ್ತೂರು:ನಮ್ಮ ದೇಶದಲ್ಲಿ ಸುಮಾರು 18 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ದೇಶಕ್ಕೆ ಬೇಕಾಗುವಷ್ಟು ಅಡಕೆ ಬೆಳೆಯಲಾಗುತ್ತಿದ್ದರೂ ಇದೀಗ ಭೂತಾನ್‍ನಿಂದ ಅಡಕೆ ಆಮದು ಮಾಡಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ದೇಶದ ಅಡಕೆ ಬೆಳೆಗಾರರ ಪರಿಸ್ಥಿತಿ ಏನಾಗಬಹುದು ಎಂಬುದನ್ನು ಕೇಂದ್ರ ಸರಕಾರ ವಿಮರ್ಶೆ ಮಾಡಬೇಕಾದ ಅಗತ್ಯವಿದೆ ಎಂದು ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಸರಕಾರವನ್ನು ಆಗ್ರಹಿಸಿದ್ದಾರೆ.


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಡಕೆ ಬೆಳೆಯನ್ನೇ ನೆಚ್ಚಿಕೊಂಡಿರುವ ದ.ಕ.ಜಿಲ್ಲೆಯಲ್ಲಿ  ರಬ್ಬರ್, ತೆಂಗು, ಕೊಕ್ಕೊ, ಬಾಳೆ ಮುಂತಾದ ಉಪಬೆಳೆಯನ್ನೂ ಮಾಡಲಾಗುತ್ತಿದೆ. ಪ್ರಸ್ತುತ ಅಡಕೆ ದರ ಹಿಂದೆಗಿಂತಲೂ ಎರಡು ಪಟ್ಟು ಜಾಸ್ತಿಯಾಗಿದ್ದರೂ, ರಾಸಾಯನಿಕ ಗೊಬ್ಬರ, ಕೂಲಿ ದರದಲ್ಲಿ ಮೂರ್ನಾಲ್ಕು ಪಟ್ಟು ಜಾಸ್ತಿಯಾಗಿದೆ. ಪರಿಣಾಮ ಅಡಕೆ ದರದಲ್ಲಿ ಏರಿಕೆಯಾದರೂ ಜಿಲ್ಲೆಯ ಆರ್ಥಿಕ ಸುಧಾರಣೆ, ಅಡಕೆ ರೈತರಿಗೆ ಪ್ರಯೋಜನವಿಲ್ಲದಂತಾಗಿದೆ. ಈ ನಡುವೆ ಅಡಕೆ ಆಮದಿನಿಂದಾಗಿ ರೈತರು ಆತಂಕದ ಪರಿಸ್ಥಿತಿಯಲ್ಲಿದ್ದಾರೆ. ಇಷ್ಟೆಲ್ಲಾ ಆದರೂ ರಾಜ್ಯದ ಮುಖ್ಯಮಂತ್ರಿ, ಜಿಲ್ಲೆಯ ಸಂಸದರು, ಶಾಸಕರು ಈ ವಿಚಾರದಲ್ಲಿ ಚಕಾರವೆತ್ತುತ್ತಿಲ್ಲ. ಈ ವಿಚಾರದಲ್ಲಿ ಅವರ ನಿಲುವು ಏನು ಎಂಬುದು ಗೊತ್ತಾಗುತ್ತಿಲ್ಲ. ಇದನ್ನು ಜನಸಾಮಾನ್ಯರು ಪ್ರಶ್ನಿಸಬೇಕಾದ ಅಗತ್ಯವಿದೆ ಎಂದು ಅವರು ತಿಳಿಸಿದರು.


ಈ ನಿಟ್ಟಿನಲ್ಲಿ ಕೇಂದ್ರ, ರಾಜ್ಯ ಸರಕಾರ ರೈತರಿಗೆ ಹೆಚ್ಚಿನ ಆದ್ಯತೆ ನೀಡಿ ಆಮದು ವಿಚಾರದಲ್ಲಿ ಒಳ್ಳೆಯ ತೀರ್ಮಾನ ತೆಗೆದುಕೊಳ್ಳಬೇಕಾಗಿದೆ. ಅಡಕೆಯ ವಿವಿಧ ಉತ್ಪನ್ನಗಳಿಗೆ ವಿಶೇಷ ನಿಧಿ ಇಟ್ಟು ಅಡಕೆ ಉತ್ಪನ್ನಗಳತ್ತ ವಿಶೇಷ ಒಲವು ತೋರಿಸಬೇಕಾಗಿದೆ. ಅಲ್ಲದೆ ಅಡಕೆ ಹಳದಿ ರೋಗದ ಕುರಿತು ಈ ವರೆಗೂ ಪರಿಹಾರ ಕಂಡುಕೊಳ್ಳಲಾಗಿಲ್ಲ. ತಕ್ಷಣ ಕೇಂದ್ರ ಸರಕಾರದ ಕೃಷಿ ವಿಜ್ಞಾನಿಗಳ ಮೂಲಕ ಒಳ್ಳೆಯ ಪ್ರಯೋಗಾಲಯವನ್ನು ತೆರೆದು ಹಳದಿ ಎಲ್ಲೆ ರೋಗಕ್ಕೆ ಪರಿಹಾರ ಕಂಡುಕೊಳ್ಳುವಲ್ಲಿ ಪ್ರಯತ್ನಿಸಬೇಕು ಎಂದು ಆಗ್ರಹಿಸಿದರು.


Ads on article

Advertise in articles 1

advertising articles 2

Advertise under the article