-->
PUTTUR: ಸಹಕಾರ ರತ್ನ ಡಾ. ಎಂ.ಎನ್.ರಾಜೇಂದ್ರ ಕುಮಾರ್ ಅಭಿನಂದನಾ ಸಮಾರಂಭ...

PUTTUR: ಸಹಕಾರ ರತ್ನ ಡಾ. ಎಂ.ಎನ್.ರಾಜೇಂದ್ರ ಕುಮಾರ್ ಅಭಿನಂದನಾ ಸಮಾರಂಭ...



ಪುತ್ತೂರು: ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರಾಗಿ 2ನೇ ಬಾರಿ ಅವಿರೋಧವಾಗಿ ಆಯ್ಕೆಗೊಂಡಿರುವ ಸಹಕಾರ ರತ್ನ ಡಾ. ಎಂ.ಎನ್.ರಾಜೇಂದ್ರ ಕುಮಾರ್ ಅವರಿಗೆ ಪುತ್ತೂರು, ಕಡಬ, ಸುಳ್ಯ ಮತ್ತು ಬೆಳ್ತಂಗಡಿ ತಾಲೂಕುಗಳ ಸಮಸ್ತ ಸಹಕಾರಿ ಬಂಧುಗಳಿಂದ ಗೌರವ ಸಮರ್ಪಣೆ ಕಾರ್ಯಕ್ರಮ ಅ.24ರಂದು ಪುತ್ತೂರು ಕೊಂಬೆಟ್ಟು ಎಂ.ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಜರುಗಲಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, 170 ಕೃಷಿ ಪತ್ತಿನ ಸಹಕಾರಿ ಸಂಘಗಳಿಗೆ 28 ವರ್ಷಗಳ ಹಿಂದೆ ತನ್ನದಾದ ಸ್ವಂತ ಜಾಗ ಅಥವಾ ಕಟ್ಟಡವಿರಲಿಲ್ಲ. ಇವತ್ತು ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ಕಡಿಮೆ ಇಲ್ಲದ ಹಾಗೆ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಪ್ರೋತ್ಸಾಹ ನೀಡಿ ಎಲ್ಲಾ ಕೇಂದ್ರಗಳು ತನ್ನದೇ ಆದ ಸ್ವಂತ ಕಟ್ಟಡದಲ್ಲಿ ಕೆಲಸ ಮಾಡಲು ಕಾರಣೀಭೂತರಾಗಿರುವಂತಹದ್ದು ಡಾ. ಎಂ.ಎನ್.ರಾಜೇಂದ್ರ ಕುಮಾರ್ ಎಂದು ಎಲ್ಲ ಸಹಕಾರಿಗಳು ತಿಳಿದ ವಿಚಾರ. ಅವರೆಲ್ಲ ಭಾವನೆಗಳನ್ನು ಒಂದು ಗೂಡಿಸಿ ರಾಜೇಂದ್ರ ಕುಮಾರ್ ಅವರನ್ನು ಅಭಿನಂದಿಸುವ ಚಿಂತನೆ ಇತ್ತು. ಅದಕ್ಕೆ ಪೂರಕವಾಗಿ ಅವರು ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರಾಗಿ 2ನೇ ಬಾರಿ ಆಯ್ಕೆಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಅವರನ್ನು ಅ.24ರಂದು ಅಭಿನಂದಿಸುವ ಕಾರ್ಯಕ್ರಮ ಅದ್ದೂರಿಯಾಗಿ ನಡೆಸಲಾಗುವುದು ಎಂದರು.


ಬೆಳಿಗ್ಗೆ 10ಕ್ಕೆ ದರ್ಬೆಯಿಂದ ಬಂಟರ ಭವನದ ತನಕ ವೈಭವದ ಮೆರವಣಿಗೆ ನಡೆಯಲಿದೆ ಕೊಂಚಾಡಿಯ ಚೆಂಡೆ, ನಾಸಿಕ್ ಬ್ಯಾಂಡ್‌ನ ಸದ್ದಿನೊಂದಿಗೆ ಸುಮಾರು 250ಕ್ಕೂ ಮಿಕ್ಕಿ ವಾಹನಗಳೊಂದಿಗೆ ಜಾಥ ನಡೆಯಲಿದೆ. ಇದರಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘ ಉದಯವಾಗಲು ಕಾರಣಕರ್ತರಾದ ಸಹಕಾರಿ ಪಿತಾಮಹಾ ಮೊಳಹಳ್ಳಿ ಶಿವರಾಯರವರ ಪ್ರತಿಮೆಯನ್ನು ಮೆರವಣಿಗೆಯ ಆರಂಭದಲ್ಲಿ ಮತ್ತು ಅದರ ಹಿಂದೆ ಸನ್ಮಾನಗೊಳ್ಳಲಿರುವ ಡಾ. ಎಂ.ಎನ್.ರಾಜೇಂದ್ರ ಕುಮಾರ್ ಮತ್ತು ಶಾಸಕ ಸಂಜೀವ ಮಠಂದೂರು ಅವರನ್ನು ತೆರೆದ ವಾಹನದಲ್ಲಿ ಸ್ವಾಗತಿಸಲಾಗುವುದು. ರಸ್ತೆಯ ಇಕ್ಕೆಲದಲ್ಲಿ ವಿವಿಧ ಸಹಕಾರಿ ಸಂಘಗಳಿಂದ ಬ್ಯಾನರ್ ಅಳವಡಿಸುವ ಕಾರ್ಯ ಈಗಾಗಲೇ ನಡೆಯುತ್ತಿದೆ ಎಂದು ಶಶಿಕುಮಾರ್ ರೈ ಬಾಲ್ಯೊಟ್ಟು ಹೇಳಿದರು.

ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮಿಗಳ ದಿವ್ಯ ಉಪಸ್ಥಿತಿಯಲ್ಲಿ ಅಭಿನಂದನಾ ಸಮಾರಂಭ ನಡೆಯಲಿದ್ದು, ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಡಾ| ಎಂ.ಎನ್.ರಾಜೇಂದ್ರ ಕುಮಾರ್ ಅವರನ್ನು ಅಭಿನಂದಿಸಲಿದ್ದಾರೆ. ಮೀನುಗಾರಿಕಾ ಮತ್ತು ಬಂದರು ಖಾತೆ ಸಚಿವ ಎಸ್ ಅಂಗಾರ ದೀಪ ಪ್ರಜ್ವಲನೆ ಮಾಡಲಿದ್ದಾರೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೆರವಣಿಗೆಯನ್ನು ಉದ್ಘಾಟಿಸಲಿದ್ದಾರೆ ಎಂದು ಹೇಳಿದರು.


Ads on article

Advertise in articles 1

advertising articles 2

Advertise under the article