-->
PUTTUR: ಹಿರಿಯ ಬಿಜೆಪಿ ಕಾರ್ಯಕರ್ತರ ಜೊತೆ ಬೆಳಕಿನ ಹಬ್ಬ ಆಚರಣೆ...!!!

PUTTUR: ಹಿರಿಯ ಬಿಜೆಪಿ ಕಾರ್ಯಕರ್ತರ ಜೊತೆ ಬೆಳಕಿನ ಹಬ್ಬ ಆಚರಣೆ...!!!



ಪುತ್ತೂರು:  ಬಿಜೆಪಿ ಪಕ್ಷವನ್ನು ರಾಷ್ಟ್ರ ಮಟ್ಟದಲ್ಲಿ ಬೆಳೆಸಿದಂತಹ ಹಿರಿಯ ಬಿಜೆಪಿ ಕಾರ್ಯಕರ್ತರನ್ನು ಜೊತೆಗೂಡಿಸಿ ಬೆಳಕಿನ ಹಬ್ಬದ ಸಂಭ್ರಮಾಚರಣೆ ಹಾಗೂ ಎಲ್ಲರಿಗೂ ಗೌರವಾರ್ಪಣೆ ಮಾಡುವ ಕಾರ್ಯಕ್ರಮ ಅ.23ರಂದು ಪುತ್ತೂರಿನ ಕೊಟೇಚಾ ಸಭಾಭವನದಲ್ಲಿ ನಡೆಯಲಿದೆ ಎಂದು ಶಾಸಕ ಸಂಜೀವ ಮಠಂದೂರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಬಿಜೆಪಿ ಗ್ರಾಮಾಂತರ ಮಂಡಲ ಮತ್ತು ನಗರ ಮಂಡಲದ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯುವುದು. ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ 221 ಬೂತ್ಗಳಲ್ಲಿರುವ, ಕಳೆದ 50-60 ವರ್ಷಗಳಿಂದ ಪಕ್ಷಕ್ಕಾಗಿ ದುಡಿದ ಹಿರಿಯ ಕಾರ್ಯಕರ್ತರನ್ನು ಗುರುತಿಸಿ ಗೌರವಿಸಲಾಗುವುದು ಎಂದರು.

ಯಾವುದೇ ಫಲಾಪೇಕ್ಷೆ ಇಲ್ಲದೆ ಪಕ್ಷ ಸಂಘಟನೆಗಾಗಿ ದುಡಿದ ಹಿರಿಯ ಕಾರ್ಯಕರ್ತರಿಗೆ ಗೌರವಾರ್ಪಣೆ ಸಲ್ಲಿಸುವ ಹಾಗೂ ಅವರೊಂದಿಗೆ ದೀಪಾವಳಿ ಸಂಭ್ರಮಾಚರಣೆ ನಡೆಸುವ ಈ ಕಾರ್ಯಕ್ರಮ ಜಿಲ್ಲೆಯಲ್ಲೇ ಹೊಸ ಪ್ರಯೋಗವಾಗಿದೆ. ಇದೊಂದು ಭಾವನಾತ್ಮಕ ಕಾರ್ಯಕ್ರಮವಾಗಿದ್ದು, ಮಧ್ಯಾಹ್ನ ಸಹಭೋಜನದ ವ್ಯವಸ್ಥೆಯನ್ನು ಮಾಡಲಾಗುವುದು. ಸಂಸದ ನಳಿನ್ ಕುಮಾರ್ ಕಟೀಲು, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ, ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಮತ್ತಿತರರು ಭಾಗವಹಿಸುವರು ಎಂದರು.


Ads on article

Advertise in articles 1

advertising articles 2

Advertise under the article