KADABA: ಯೇನೆಕಲ್ಲು ಹೊಳೆಯಲ್ಲಿ ಇಬ್ಬರ ಮೃತದೇಹ...
Wednesday, November 16, 2022
ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಸಮೀಪದ ಯೇನೆಕಲ್ಲು ಹೊಳೆಯ ನೀರಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ಧರ್ಮಪಾಲ ಪರಮಲೆ(46) ಮತ್ತು ಬೆಳ್ಚಪ್ಪ ಚಳ್ಳಂಗಾರು ಚೊಕ್ಕಾಡಿ(49) ಎಂದು ಗುರುತಿಸಲಾಗಿದೆ.
ನಿನ್ನೆ ರಾತ್ರಿ ಆಕಸ್ಮಿಕವಾಗಿ ಕಾಲುಜಾರಿ ಹೊಳೆಗೆ ಬಿದ್ದಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಇಂದು ಬೆಳಗ್ಗೆ ಯೇನೆಕಲ್ಲು ಮುಖ್ಯ ರಸ್ತೆಯ ಸೇತುವೆಯ ಕೆಳಭಾಗದಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದೆ. ಇನ್ನು ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.