
KUDLA: ಕುಕ್ಕೆಯಲ್ಲಿ ಅನ್ಯಮತೀಯರಿಗೆ ವ್ಯಾಪಾರ ನಿರ್ಬಂಧ...!!!
ಮಂಗಳೂರು: ಕರಾವಳಿಯಲ್ಲಿ ಹಿಜಾಬ್ ವಿವಾದ ವೇಳೆ ಸದ್ದು ಮಾಡಿದ್ದ ಅನ್ಯಮತೀಯರಿಗೆ ವ್ಯಾಪಾರ ನಿರ್ಬಂಧ ಆಂದೋಲನ ಮತ್ತೆ ಸದ್ದು ಮಾಡಿದೆ. ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ ಜಾತ್ರೋತ್ಸವದಲ್ಲಿ ಅನ್ಯಧರ್ಮಿಯರಿಗೆ ವ್ಯಾಪಾರಕ್ಕೆ ಅವಕಾಶ ನೀಡಬಾರದೆಂದು ಒತ್ತಾಯಿಸಲಾಗಿದೆ. ಕ್ಷೇತ್ರದ ಕುಮಾರಧಾರ ದ್ವಾರದ ಬಳಿ ಈ ಬ್ಯಾನರ್ ಹಾಕಲಾಗಿದ್ದು, ಹಿಂದೂ ಜಾಗರಣಾ ವೇದಿಕೆ ಸುಬ್ರಹ್ಮಣ್ಯ ಘಟಕದ ಹೆಸರಿದೆ. ಈ ಬಾರಿ ಕ್ಷೇತ್ರದಲ್ಲಿ ಜಾತ್ರಾ ಸಮಯ ಸಂತೆಗಳಲ್ಲಿ ಹಿಂದೂ ಗಳಿಗೆ ಬಿಟ್ಟು ಹಿಂದೂಯೇತರರಿಗೆ ವ್ಯಾಪಾರ ವಹಿವಾಟುಗಳಿಗೆ ಅವಕಾಶ ಮಾಡಿಕೊಡಬಾರದೆಂದು ಕೂಡ ಒತ್ತಾಯಿಸಿದೆ. ಇದರಿಂದ ಜಿಲ್ಲೆಯಲ್ಲಿ ಮತ್ತೆ ಧರ್ಮ ಸಂಘರ್ಷ ಕಾಣಿಸಿಕೊಳ್ಳುವ ಆತಂಕ ಶುರುವಾಗಿದೆ.
ಜಾತ್ರಾ ಮಹೋತ್ಸಗಳು ನಡೆಯುವ ಸಂದರ್ಭದಲ್ಲಿ ಹಿಂದೂಗಳಿಗೆ ಮಾತ್ರ ವ್ಯಾಪಾರ ವಹಿವಾಟು ನಡೆಸುವ ಅವಕಾಶ ನೀಡುವಂತೆ ಆಗ್ರಹಿಸಲಾಗಿದೆ. ಹಿಂದೂ ಧರ್ಮದವರನ್ನು ಹೊರತು ಪಡಿಸಿ ಬೇರೆ ಧರ್ಮದವರಿಗೆ ವ್ಯಾಪಾರ ಮಾಡಲು ಅವಕಾಶ ನೀಡದಂತೆ ಆಗ್ರಹ ಮಾಡಲಾಗಿದೆ. ಹಿಂದೂ ಸಂಘಟನೆಗಳಿಂದ ಧಾರ್ಮಿಕ ದತ್ತಿ ಇಲಾಖೆಗೆ ಹಾಗೂ ಸರ್ಕಾರಕ್ಕೆ ಮನವಿ ಮಾಡಲಾಗಿದೆ.