MANGALORE: ನಾಳೆ ಮಂಗಳೂರಿನ ಆರ್ ಟಿಓ ಮುಂಭಾಗ ಟ್ಯಾಕ್ಸಿಮನ್ ಗಳ ಪ್ರತಿಭಟನೆ...!!!
Monday, November 14, 2022
ಮಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಟ್ಯಾಕ್ಸಿಮನ್ ಗಳಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ದ.ಕ. ಜಿಲ್ಲಾ ಟ್ಯಾಕ್ಸಿ ಮತ್ತು ಕ್ಯಾಬ್ ಅಸೋಸಿಯೇಷನ್ ನಾಳೆ ಮಂಗಳೂರಿನ ಆರ್ ಟಿಓ ಕಚೇರಿ ಬಳಿ ಪ್ರತಿಭಟನೆಗೆ ಮುಂದಾಗಿದ್ದಾರೆ.
ಇದರ ಜೊತೆಗೆ ಸುರತ್ಕಲ್ ಎನ್ ಐಟಿಕೆ ಅಕ್ರಮ ಟೋಲ್ ಗೇಟ್ ನ್ನ ತೆರವು ಮಾಡಲು ಕೂಡ ಪ್ರತಿಭಟಿಸಲಾಗುವುದು ಎಂದು ಅಸೋಸಿಯೇಷನ್ ನ ಸದಸ್ಯರು ತಿಳಿಸಿದ್ದಾರೆ. ನಾಳೆ ಬೆಳಿಗ್ಗೆ 11 ಗಂಟೆಗೆ ಮಂಗಳೂರಿನ ಆರ್ ಟಿ ಓ ಕಚೇರಿ ಬಳಿ ಪ್ರತಿಭಟನೆ ನಡೆಯಲಿದ್ದು, ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ನ ಕೆಲ ಬೇಡಿಕೆಗಳನ್ನು ಈಡೇರಿಸಲು ಒತ್ತಾಯ ಮಾಡಲಾಗುವುದು ಎಂದು ತಿಳಿಸಿದ್ದಾರೆ.
