MANGALORE: ಬೆಚ್ಚಿ ಬಿದ್ದ ಮಂಗಳೂರು...
Saturday, November 19, 2022
ಮಂಗಳೂರು: ಮಂಗಳೂರಿನ ನಾಗುರಿಯಲ್ಲಿ ಆಟೋ ರಿಕ್ಷಾವೊಂದು ನಿಗೂಢವಾಗಿ ಸ್ಫೋಟಗೊಂಡಿದ್ದು, ಅದರಲ್ಲಿದ್ದ ಓರ್ವ ಪ್ರಯಾಣಿಕ ಹಾಗೂ ಚಾಲಕನಿಗೆ ಗಂಭೀರ ಗಾಯವಾಗಿದೆ. ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಘಟನೆ: ಇಂದು ಸಂಜೆ ಸುಮಾರು 5 ಗಂಟೆಗೆ ಆಟೋಗೆ ಪ್ರಯಾಣಿಕ ಹತ್ತಿದ ಸಮಯದ ಕೆಲವೇ ನಿಮಿಷಗಳಲ್ಲಿ ಆಟೋ ಸ್ಫೋಟಗೊಂಡಿದೆ. ಈ ಸ್ಫೋಟಕ್ಕೆ ಇಡೀ ಮಂಗಳೂರಿಗರು ಒಮ್ಮೆಗೆ ಬೆಚ್ಚಿ ಬಿದ್ದಿದ್ದಾರೆ. ಇನ್ನು ಆಟೋದಲ್ಲಿ ಕುಕ್ಕರ್ ಒಂದು ಇರೋದು ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಇದೇ ವೇಳೆ ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ತಜ್ಝರು ಕೂಡ ಆಗಮಿಸಿ ಘಟನೆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಘಟನೆ ಬಗ್ಗೆ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.