MANGALURE: ಪ್ರಜಾಪ್ರಭುತ್ವದಲ್ಲಿ ಮಾಧ್ಯಮದ ಕೆಲಸ ಜವಾಬ್ದಾರಿಯುತವಾದದ್ದು: ರಮಾನಾಥ ರೈ
Wednesday, November 16, 2022
ಮಂಗಳೂರು: ರಾಷ್ಟ್ರೀಯ ಪತ್ರಿಕಾ ದಿನದ ಹಿನ್ನೆಲೆ ಮಾಜಿ ಸಚಿವ ರಮಾನಾಥ ರೈ ಅವರು ಪತ್ರಕರ್ತರಿಗೆ ಶುಭಾಶಯಗಳನ್ನು ತಿಳಿಸಿ ಟ್ವೀಟ್ ಮಾಡಿದ್ದಾರೆ.
ಟ್ವೀಟ್ ನಲ್ಲಿ ರಮಾನಾಥ ರೈ ಅವರು, ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪತ್ರಿಕಾ ಮಾಧ್ಯಮವು ಒಂದು ಜವಾಬ್ದಾರಿಯುತ ಸ್ಥಾನದಲ್ಲಿದ್ದು ಕೆಲಸ ಮಾಡುತ್ತಿದೆ. ಪತ್ರಿಕಾ ಮಾಧ್ಯಮದಲ್ಲಿ ನಿಸ್ವಾರ್ಥವಾಗಿ ಕೆಲಸ ಮಾಡುವ ಎಲ್ಲಾ ನನ್ನ ಮಾಧ್ಯಮ ಮಿತ್ರರಿಗೆ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯ ಶುಭಾಶಯಗಳು ಎಂದು ತಿಳಿಸಿದ್ದಾರೆ.