Mangaluru: ಸ್ಯಾಟಲೈಟ್ ಫೋನ್ ಜಾಡು ಹಿಡಿದು ಹೊರಟ ಪೊಲೀಸ್!
Friday, November 25, 2022
ಮಂಗಳೂರು: ನಗರದ ನಾಗುರಿಯಲ್ಲಿ ನಡೆದ ಕುಕ್ಕರ್ ಬಾಂಬ್ ಬ್ಲಾಸ್ಟ್ ಮುನ್ನ ದಿನ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಳಕೆ ನಿಷೇಧಿತ ಸ್ಯಾಟಲೈಟ್ ಫೋನ್ ರಿಂಗುಣಿಸಿದ್ದು ಪತ್ತೆಯಾಗಿದೆ.
ಈ ವಿಚಾರ ಆಂತರಿಕ ಭದ್ರತಾ ಇಲಾಖೆಯ ಗಮನಕ್ಕೆ ಬಂದಿದ್ದು, ಶುಕ್ರವಾರ ದಕ್ಷಿಣ ಕನ್ನಡ ಜಿಲ್ಲೆಯ ಎರಡು ಪ್ರದೇಶದಲ್ಲಿ ಅಂತರಿಕ ಭದ್ರತಾ ಇಲಾಖೆ ಹಾಗೂ ಪೊಲೀಸ್ ಇಲಾಖೆ ತನಿಖೆ ನಡೆಸಿದೆ.
ನವಂಬರ್ 18 ರಂದು ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ಗ್ರಾಮದ ಬೆಂದ್ರಾಳ ಅರಣ್ಯ ಪ್ರದೇಶದಲ್ಲಿ ಹಾಗೂ ಬಂಟ್ವಾಳ ತಾಲೂಕಿನ ಕೈಕುಂಜೆ ಪ್ರದೇಶದಲ್ಲಿ ಕೂಡ ಸಾಟಲೈಟ್ ಸದ್ದು ಮಾಡಿದೆ ಎನ್ನಲಾಗಿದೆ. ಈ ಬಗ್ಗೆ ಸ್ಥಳೀಯ ಪೊಲೀಸರು ಹಾಗೂ ಮಂಗಳೂರು ಆಂತರಿಕ ಭದ್ರತಾ ಇಲಾಖೆಯ ಇನ್ಸ್ಪೆಕ್ಟರ್ ಚಿದಾನಂದ್ ಮತ್ತು ತಂಡ ಪರಿಶೀಲನೆ ಮಾಡುತ್ತಿದೆ.

