Mangaluru: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಆರೋಗ್ಯ ವಿಚಾರಿಸಿದ ಸಿಎಂ
Saturday, November 19, 2022
ಮಂಗಳೂರು: ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಗ್ಯ ಗೌಡ ಪ್ರತಿಮೆ ಅನಾವರಣಕ್ಕಾಗಿ ಮಂಗಳೂರಿಗೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಗ್ಯ ವಿಚಾರಿಸಿದರು.
ಮಂಗಳೂರು ವಿಮಾನ ನಿಲ್ದಾಣದಿಂದ ನೇರವಾಗಿ ಎಜೆ ಆಸ್ಪತ್ರೆಗೆ ತೆರಳಿದ ಸಿಎಂ, ನಳಿನ್ ಕುಮಾರ್ ಆರೋಗ್ಯ ವಿಚಾರಿಸಿ ಕೆಲ ಹೊತ್ತು ಮಾತುಕತೆ ನಡೆಸಿದರು. ಇದೇ ಸಂದರ್ಭ ವೈದ್ಯರ ಜೊತೆ ಮಾಹಿತಿ ಪಡೆದುಕೊಂಡರು.
ಕೆಲ ದಿನಗಳ ಹಿಂದಷ್ಟೇ ಆಸ್ಪತ್ರೆಗೆ ದಾಖಲಾಗಿ ನಳಿನ್ ಕುಮಾರ್ ಕಟೀಲ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.
ಈ ಸಂದರ್ಭ ಸಚಿವ ಡಾ. ಅಶ್ವತ್ಥ ನಾರಾಯಣ, ಸದಾನಂದ ಗೌಡ, ಅಂಗಾರ, ಡಾ.ಭರತ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.