ರೂಪೇಶ್ ಶೆಟ್ಟಿಗೆ ನಿಂದನೆ, ಬೆದರಿಕೆ; ಪೊಲೀಸರ ಮೊರೆ ಹೋದ ಕುಟುಂಬಿಕರು!
Tuesday, November 8, 2022
ಮಂಗಳೂರು: ಬಿಗ್ ಬಾಸ್ 9 ನೇ ಆವೃತ್ತಿಯ ಸ್ಪರ್ಧಿ, ಕೋಸ್ಟಲ್ ವುಡ್ ನಟ ರೂಪೇಶ್ ಶೆಟ್ಟಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿರುವ ಬಗ್ಗೆ ಮಂಗಳೂರು ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಈ ಬಗ್ಗೆ ರೂಪೇಶ್ ಶೆಟ್ಟಿ ಅವರ ಕುಟುಂಬ ಸದಸ್ಯರು ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದು, ಸೆನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ರೂಪೇಶ್ ಶೆಟ್ಟಿ ಬಿಗ್ ಬಾಸ್ ನಲ್ಲಿ ನೀಡಿರುವ ಹೇಳಿಕೆಗಳನ್ನಿಟ್ಟುಕೊಂಡು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದ್ದಾರೆ. ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ರೂಪೇಶ್ ಅವರ ಕುಟುಂಬ ಸದಸ್ಯರು ದೂರು ನೀಡಿದ್ದಾರೆ.