.jpeg)
UDUPI: ಶಿಕ್ಷಣಾಧಿಕಾರಿ ಹೊರಡಿಸಿದ ಸುತ್ತೊಲೆಗೆ ಕಾಂಗ್ರೆಸ್ ಅಕ್ರೋಶ
Monday, November 7, 2022
ಉಡುಪಿ: ಬೈಂದೂರಿನಲ್ಲಿ ಇಂದು ನಡೆಯಲಿರುವ ಸಿಎಂ ಕಾರ್ಯಕ್ರಮಕ್ಕೆ ಶಿಕ್ಷಕರ ಹಾಜರಾತಿ ಕಡ್ಡಾಯಗೊಳಿಸಿ ಬೈಂದೂರು ಬಿಇಒ ಆದೇಶ ಹೊರಡಿಸಿದ್ದಾರೆ. ಇದೀಗ ಈ ಆದೇಶದ ವಿರುದ್ಧ ಕಾಂಗ್ರೆಸ್ ಕೆಂಡಾಮಂಡಲವಾಗಿದೆ.
ಯಸ್ ಸರ್ಕಾರಿ ಕಾರ್ಯಕ್ರಮಕ್ಕೆ ಶಿಕ್ಷಕರ ಹಾಜರಾತಿಯನ್ನ ಕಡ್ಡಾಯಗೊಳಿಸಿರುವುದು ಎಷ್ಟು ಸರಿ ಅಂತ ಕಾಂಗ್ರೆಸ್ ಪ್ರಶ್ನೆ ಮಾಡಿದೆ. ಈ ನಡುವೆ ಶಿಕ್ಷಣಾಧಿಕಾರಿ ಹೊರಡಿಸಿದ ಸುತ್ತೋಲೆಗೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಸರ್ಕಾರವನ್ನ ಟ್ವೀಟ್ ಮೂಲಕ ಕೆಣಕಿದೆ. ಎಲ್ಲಾ ಶಿಕ್ಷಕರು ಸಿಎಂ ಕಾರ್ಯಕ್ರಮಕ್ಕೆ ಆಗಮಿಸಿದ್ರೆ, ಶಾಲೆಯಲ್ಲಿ ಮಕ್ಕಳಿಗೆ ಪಾಠ ಮಾಡುವವರು ಯಾರು ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಸರ್ಕಾರಕ್ಕೆ ಪ್ರಶ್ನಿಸಿದೆ.
ಇನ್ನು ಇಂದು ಸಿಎಂ ಬಸವರಾಜ ಬೊಮ್ಮಾಯಿ ಬೈಂದೂರಿಗೆ ಆಗಮಿಸಲಿದ್ದು, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಶಂಕುಸ್ಥಾಪನೆ ಮಾಡಲಿದ್ದಾರೆ. ಸುಮಾರು 1318 ಕೋಟಿ ಮೌಲ್ಯದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.