MANGALORE: ಸಮಾಜ ಕಾರ್ಯ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ
Wednesday, December 14, 2022
ಮಂಗಳೂರು: ಗುಲ್ಬರ್ಗಾ ವಿಶ್ವವಿದ್ಯಾಲಯದ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಗರದ ಮಂಗಳೂರು ವಿಶ್ವವಿದ್ಯಾಲಯದ ಸಮಾಜ ಕಾರ್ಯ ವಿಭಾಗದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಸಮಾಜ ಕಾರ್ಯ ವಿಭಾಗ ಮುಖ್ಯಸ್ಥ ಪ್ರೊ.ಪೌಲ್ ಜಿ ಅಕ್ವಿನಸ್ ವ್ಯಕ್ತಿತ್ವ ವಿಕಸನ ಉಪನ್ಯಾಸ ನೀಡಿದ್ರು. ಬಳಿಕ ಡಾ. ಮೋಹನ್ ಸಿಂಘೆ ಪ್ರಾದ್ಯಾಪಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ್ರು. ಬಳಿಕ ಮಂಗಳೂರು ವಿಶ್ವವಿದ್ಯಾಲಯ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳಿಂದ ಬೀದಿ ನಾಟಕ ನಡೆಯಿತು.
ಕಾರ್ಯಕ್ರಮದಲ್ಲಿ ಗುಲ್ಬರ್ಗಾ ವಿಶ್ವವಿದ್ಯಾಲಯದ ಸುಮಾರು ೨೦ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು.
