-->
MANGALORE: ಜಿಲ್ಲೆಯ ಕಾನೂನು ಸುವ್ಯವಸ್ಥೆಯನ್ನ ಸಂಘಪರಿವಾರಕ್ಕೆ ಹೊರಗುತ್ತಿಗೆ ನೀಡಲಾಗಿದ್ಯ!?

MANGALORE: ಜಿಲ್ಲೆಯ ಕಾನೂನು ಸುವ್ಯವಸ್ಥೆಯನ್ನ ಸಂಘಪರಿವಾರಕ್ಕೆ ಹೊರಗುತ್ತಿಗೆ ನೀಡಲಾಗಿದ್ಯ!?



ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘಪರಿವಾರದವರ ಅನೈತಿಕ ಪೊಲೀಸ್ ಗಿರಿ ಮಿತಿ ಮೀರುತ್ತಿದ್ದು, ಉತ್ತರ ಪ್ರದೇಶದ ಗೂಂಡಾ ಸಂಸ್ಕೃತಿಯನ್ನು ಮಂಗಳೂರಿನಲ್ಲಿ ವ್ಯವಸ್ಥಿತವಾಗಿ ಕಾರ್ಯರೂಪಕ್ಕೆ ತರಲು ದುಷ್ಟ ಶಕ್ತಿಗಳು ಶ್ರಮಿಸುತ್ತಿದೆ ಎಂದು SDPI ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು ಹೇಳಿದ್ದಾರೆ. 

ಮಾಧ್ಯಮ ಪ್ರಕಟಣೆ ಬಿಡುಗಡೆಗೊಳಿಸಿರುವ ಅವರು, ಜಿಲ್ಲೆಯಲ್ಲಿ ನಡೆಯುತ್ತಿರುವ ಅನೈತಿಕ ಪೊಲೀಸ್ ಗಿರಿಗೆ ಪೊಲೀಸ್ ಇಲಾಖೆ ಕೂಡಲೇ ಕಡಿವಾಣ ಹಾಕದಿದ್ದರೆ ಪರಿಸ್ಥಿತಿ ಕೈಮೀರಿ ಹೋಗುವ ಸಾದ್ಯತೆಗಳಿವೆ. ಆದ್ರೆ ಪೊಲೀಸ್ ಇಲಾಖೆ ನಿರ್ವಹಿಸಬೇಕಾದ ಕಾನೂನು ಸುವ್ಯವಸ್ಥೆಯನ್ನು ಸಂಘ ಪರಿವಾರದ ಗೂಂಡಾಗಳಿಗೆ ಹೊರಗುತ್ತಿಗೆ ನೀಡಲಾಗಿದೆಯೇ ಎಂದು ಅವರು ಪ್ರಶ್ನಿಸಿದ್ದಾರೆ.

ಇತ್ತೀಚೆಗೆ ಮಂಗಳೂರಿನ ಚಿನ್ನದ ಅಂಗಡಿಯೊಂದಕ್ಕೆ ನುಗ್ಗಿದ ಸಂಘಪರಿವಾರದವರು ಅಲ್ಲಿ ಕೆಲಸ ಮಾಡುತ್ತಿದ್ದ ಮುಸ್ಲಿಂ ಸಮುದಾಯದ ಯುವಕನಿಗೆ ಥಳಿಸಿದ್ದಾರೆ. ಆ ನಂತರ ಮಂಗಳೂರಿನಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಸಂಘಪರಿವಾರದವರು ನಿನ್ನೆ ಬಂಟ್ವಾಳ ತಾಲೂಕಿನ ರಾಯಿಯಲ್ಲಿ ಸುಳ್ಳು ಆರೋಪ ಹೊರಿಸಿ ಅಮಾಯಕ ವ್ಯಕ್ತಿಯೊಬ್ಬನನ್ನು ಮರಕ್ಕೆ ಕಟ್ಟಿಹಾಕಿ ಭೀಕರವಾಗಿ ಹಲ್ಲೆ ಮಾಡುವ ಮೂಲಕ ಉತ್ತರ ಪ್ರದೇಶದ ಗೂಂಡಾ ಸಂಸ್ಕೃತಿ ಯನ್ನು ರಾಜಾರೋಷವಾಗಿ ಮಾಡಿದ್ದಾರೆ. ಗಂಭೀರ ಸ್ವರೂಪದ ಗಾಯಗೊಂಡ ಸಂತ್ರಸ್ತರಿಗೆ ಸೂಕ್ತ ರೀತಿಯ ಚಿಕಿತ್ಸೆ ನೀಡದೆ ಪೊಲೀಸರು ಬಿಟ್ಟು ಕಳಿಸಿದ್ದಾರೆ. ಇದರ ವಿರುದ್ಧ ಅವರ ಸಂಬಂಧಿಕರು ಸುಮೋಟೋ ಕೇಸು ದಾಖಲಿಸುವಂತೆ ಪೊಲೀಸರಲ್ಲಿ ಕೇಳಿಕೊಂಡಾಗ ನಮಗೆ ಈ ಬಗ್ಗೆ ಕ್ರಮ ಕೈಗೊಳ್ಳಲು ಮುಕ್ತ ಸ್ವಾತಂತ್ರ್ಯ ಇಲ್ಲ ಎಂದು ಹೇಳಿರುವುದು ಪೊಲೀಸರ ಅಸಹಾಯಕತೆ ಮತ್ತು ಒತ್ತಡ ವನ್ನು ಪ್ರತಿಬಿಂಬಿಸುತ್ತದೆ.

 ಈ ಘಟನೆ ಒಂದು ಗಂಭೀರ ಸ್ವರೂಪದ ವಿಚಾರವಾಗಿದೆ. ಅದ್ದರಿಂದ ಜಿಲ್ಲಾಡಳಿತ,ಮಂಗಳೂರು ನಗರ  ಪೋಲಿಸ್ ಕಮಿಷನರ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕೂಡಲೇ ಮಧ್ಯೆ ಪ್ರವೇಶಿಸಿ ಬಸ್ಸು ನಿರ್ವಾಹಕ ಸೇರಿದಂತೆ ಘಟನೆಗೆ ಸಂಬಂಧಪಟ್ಟ ಎಲ್ಲಾ  ಆರೋಪಿಗಳನ್ನು ಯಾವುದೇ ಒತ್ತಡಗಳಿಗೆ ಮಣಿಯದೆ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಜಿಲ್ಲೆಯ ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಒತ್ತಾಯಿಸಿದ್ದಾರೆ.

Ads on article

Advertise in articles 1

advertising articles 2

Advertise under the article