-->
MANGALORE: ಮಂಗಳೂರು ವಿವಿ ಪರೀಕ್ಷಾ ಫಲಿತಾಂಶ ವಿಳಂಬಕ್ಕೆ ಎಬಿವಿಪಿ ಆಕ್ರೋಶ

MANGALORE: ಮಂಗಳೂರು ವಿವಿ ಪರೀಕ್ಷಾ ಫಲಿತಾಂಶ ವಿಳಂಬಕ್ಕೆ ಎಬಿವಿಪಿ ಆಕ್ರೋಶ



ಕೊಣಾಜೆ: ಪದವಿ ಪರೀಕ್ಷಾ ಫಲಿತಾಂಶ ವಿಳಂಬ ಖಂಡಿಸಿ ಎಬಿವಿಪಿ ಕಾರ್ಯಕರ್ತರು ಮಂಗಳೂರು ವಿ.ವಿಯ ಆಡಳಿತ ಕಚೇರಿಯಲ್ಲಿ ನಡೆಯುತ್ತಿದ್ದ ಸಿಂಡಿಕೇಟ್ ಸಭೆಗೆ ನುಗ್ಗಲು ಯತ್ನಿಸಿದ ಘಟನೆ ನಡೆದಿದೆ. 

ಈ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ನೂಕಾಟ-ತಳ್ಳಾಟ ನಡೆದು ವಾಗ್ವಾದ ನಡೆಯಿತು.ಎಲ್ಲ ಸಮಸ್ಯೆಗಳಿಗೆ ಮಂಗಳೂರು ವಿವಿಯ ಕುಲಪತಿ ಹಾಗೂ ಪರೀಕ್ಷಾಂಗ ಕುಲಸಚಿವರು ಕಾರಣ ಎಂದು ವಿದ್ಯಾರ್ಥಿಗಳು ಅಳಲನ್ನು ತೋಡಿಕೊಂಡರು.

ಎಲ್ಲ ಸಮಸ್ಯೆಗಳಿಗೆ ಕುಲಸಚಿವರೇ ಕಾರಣ ಎಂಬ ಆರೋಪಕ್ಕೆ ಭಾವುಕರಾದ ಪರೀಕ್ಷಾಂಗ ಕುಲಸಚಿವ ಪ್ರೊ. ಪಿ.ಎಲ್. ಧರ್ಮ ಅವರು ಮಾತನಾಡಿ, ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಾ ಫಲಿತಾಂಶ ವಿಳಂಬಕ್ಕೆ ಪರೀಕ್ಷಾಂಗ ಕುಲಸಚಿವರ ರಾಜೀನಾಮೆಗೆ ಆಗ್ರಹಿಸುತ್ತಿದ್ದು, ಪರಿಹಾರ ದೊರಕುವುದಾದರೆ ನಾನು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಲು ರಾಜೀನಾಮೆ ಪತ್ರ ಬರೆದು ಸಿದ್ಧನಾಗಿಯೇ ಬಂದಿದ್ದೇನೆ ಎಂದರು.

ವಿವಿ ವಿದ್ಯಾರ್ಥಿಗಳಿಗೆ ಸಹಾಯವೇ ಮಾಡಿದೆ. ಜನವರಿ 25ರ ಒಳಗಡೆ ಫಲಿತಾಂಶ ಪ್ರಕಟಣೆಗೆ ಎಲ್ಲ ವ್ಯವಸ್ಥೆ ಮಾಡುತ್ತೇವೆ ಎಂಬ ಭರವಸೆ ನೀಡಬಲ್ಲೆ ಎಂದು ಹೇಳಿದ್ದಾರೆ.

Ads on article

Advertise in articles 1

advertising articles 2

Advertise under the article