ಕಾರ್ಕಳ: ಖಾಸಗಿ ಬಸ್ - ಕಾರು ಡಿಕ್ಕಿ; ಒಂದೇ ಕುಟುಂಬದ ಮೂವರ ಸಾವು
Saturday, December 10, 2022
ಉಡುಪಿ: ಖಾಸಗಿ ಬಸ್ ಹಾಗೂ ಕಾರು ನಡುವೆ ನಡೆದ ಭೀಕರ ಅಪಘಾತದಲ್ಲಿ ಆಂಧ್ರ ಮೂಲದ ಕುಟುಂವೊಂದರು ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕಾರ್ಕಳ ತಾಲೂಕಿನ ಬಜಗೋಳಿ ಸಮೀಪದ ನೆಲ್ಲಿಕಾರು ಎಂಬಲ್ಲಿ ಇಂದು ಮುಂಜಾವ ಸಂಭವಿಸಿದೆ.
ಮೃತರನ್ನು ಆಂಧ್ರಪ್ರದೇಶ ಮೂಲದ ನಾಗರಾಜ್ (40), ಅವರ ಪತ್ನಿ ಪ್ರತ್ಯುಷಾ (32) ಹಾಗೂ ಎಳೆಯ ಮಗುವೊಂದಿತ್ತು ಎಂದು ತಿಳಿದು ಬಂದಿದೆ.
ಸಾರ್ವಜನಿಕರ ಸಹಕಾರದಿಂದ ಮೃತದೇಹಗಳನ್ನು ಕಾರಿನಿಂದ ಹೊರತೆಗೆದು ಆಸ್ಪತ್ರೆಗೆ ರವಾನಿಸಲಾಗಿದೆ. ಕಾರ್ಕಳ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.