ಮಂಗಳೂರು: ನ್ಯೂ ಇಯರ್ ಪಾರ್ಟಿಗೆ ವಾರ್ನಿಂಗ್ ಬೆನ್ನಲ್ಲೇ ಹಿಂದೂ ಸಂಘಟನೆ ನಾಯಕರಿಗೆ ನೋಟೀಸ್!
Thursday, December 22, 2022
ಮಂಗಳೂರು: ಹೊಸ ವರ್ಷಾಚರಣೆ ಪಾರ್ಟಿಯಲ್ಲಿ ಕೇರಳ ಮೂಲದ ಯುವಕರು ಭಾಗವಹಿಸುತ್ತಿದ್ದು, ಡ್ರಗ್ ಹಾಗೂ ಸೆಕ್ಸ್ ಮಾಫಿಯಾಕ್ಕೆ ಕಾರಣವಾಗಲಿದೆ. ಹಾಗಾಗಿ ನಗರದಲ್ಲಿ ಹಮ್ಮಿಕೊಂಡ ಪಾರ್ಟಿಗಳಿಗೆ ಅನುಮತಿ ನೀಡದಂತೆ ಬಜರಂಗದಳ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮನವಿ ನೀಡಿದೆ.
ಅದಾಗ್ಯೂ ಹೊಸ ವರ್ಷ ಪಾರ್ಟಿ ವೇಳೆ ಹಿಂದೂ ಸಂಘಟನೆಗಳಿಂದ ಅನೈತಿಕ ಪೊಲೀಸ್ ಗಿರಿ ನಡೆಯುವ ಸಾಧ್ಯತೆ ಹೆಚ್ಚಿದ್ದು, ಹಾಗಾಗಿ ಪೊಲೀಸರು ಇದೀಗ ಕಾನೂನು ಅಸ್ತ್ರ ಪ್ರಯೋಗಿಸಲು ಮುಂದಾಗಿದ್ದಾರೆ.
ಬಜರಂಗದಳ ಸಹಿತ ವಿವಿಧ ಹಿಂದೂ ಸಂಘಟನೆಗಳ ಪ್ರಮುಖರಿಗೆ ನೋಟೀಸ್ ಜಾರಿಗೊಳಿಸಿದ್ದು, ಸೆಕ್ಷನ್ 107 ಅಡಿ ಮೊಕದ್ದಮೆ ಹೂಡಲು ಮುಂದಾಗಿದೆ. ಪೊಲೀಸರ ಈ ನಡೆಗೆ ಸಂಘಟನೆಯ ಪ್ರಮುಖರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳೂರು ನಗರದಲ್ಲಿ ಹಲವು ಬಾರ್, ಪಬ್, ಹೊಟೇಲ್ ಗಳಲ್ಲಿ ಹೊಸ ವರ್ಷಾಚರಣೆ ಪ್ರಯುಕ್ತ ಪಾರ್ಟಿ ಆಯೋಜಿಸಲಾಗಿದೆ.
ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಇತ್ತೀಚೆಗೆ 9 ಅನೈತಿಕ ಪೊಲೀಸ್ ಗಿರಿ ಪ್ರಕರಣಗಳು ವರದಿಯಾಗಿದ್ದವು.