ಮಂಗಳೂರು: ಯಕ್ಷಗಾನ ರಂಗಸ್ಥಳದಲ್ಲೇ ಕುಸಿದು ಮೃತಪಟ್ಟ ಗುರುವಪ್ಪ ಬಾಯಾರು
Friday, December 23, 2022
ಮಂಗಳೂರು: ಯಕ್ಷಗಾನ ರಂಗಸ್ಥಳದಲ್ಲೇ ಹೃದಯಾಘಾತವಾಗಿ ಕಟೀಲು ಮೇಳದ ಕಲಾವಿದರೊಬ್ಬರು ನಿಧನರಾದ ಘಟನೆ ನಡೆದಿದೆ.
ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ನಾಲ್ಕನೇ ಮೇಳದ ಕಲಾವಿದ ಗುರುವಪ್ಪ ಬಾಯಾರು (58) ಮೃತ ಕಲಾವಿದರು. ಕಟೀಲು ಕ್ಷೇತ್ರದ ಸರಸ್ವತೀ ಸದನದಲ್ಲಿ ಗುರುವಾರ ತ್ರಿಜನ್ಮ ಮೋಕ್ಷ ಯಕ್ಷಗಾನ ನಡೆಯುತ್ತಿದ್ದು ಈ ಸಂದರ್ಭ ಶಿಶುಪಾಲನ ಪಾತ್ರಧಾರಿಯಾಗಿದ್ದ ಗುರುವಪ್ಪ ಬಾಯರು ರಂಗಸ್ಥಳದಲ್ಲೇ ಇದ್ದರು. ಇನ್ನೊಂದು ಪಾತ್ರಧಾರಿ ಯಕ್ಷಗಾನದ ರಂಗಸ್ಥಳದಲ್ಲಿ ಕುಣಿಯುತ್ತಿದ್ದಾಗ ಅಲ್ಲೇ ಇದ್ದ ಗುರುವಪ್ಪ ಬಾಯಾರು ಅವರಿಗೆ ಹೃದಾಯಾಘಾತವಾಗಿ ರಂಗಸ್ಥಳದಿಂದ ಕೆಳಗೆ ಕುಸಿದು ಬಿದ್ದರು. ತಕ್ಷಣ ಅವರನ್ನು ಸ್ಥಳೀಯ ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಮಂಗಳೂರಿನ ಅಸ್ಪತ್ರೆಗೆ ಕೊಡ್ಯೊಯ್ದರೂ ಚಿಕಿತ್ಸೆ ಫಲಕಾರಿ ಆಗದೆ ನಿಧನರಾಗಿದ್ದಾರೆ. ತ್ರಿಜನ್ಮ ಮೋಕ್ಷ ಯಕ್ಷಗಾನ ಪ್ರದರ್ಶನದಲ್ಲೇ ಶಿಶುಪಾಲನಾಗಿದ್ದ ಗುರುವಪ್ಪ ಬಾಯಾರು ಮೋಕ್ಷ ಪಡೆದಿದ್ದಾರೆ.
ವೀಡಿಯೋ ವೀಕ್ಷಿಸಿ