-->
ದೆಹಲಿ ‘ರಿಪಬ್ಲಿಕ್ ಡೇ‘ ಪರೇಡ್ ಗೆ ಆಯ್ಕೆಯಾದ ಪುತ್ತೂರಿನ ಡಾ. ವಜೀದಾ ಬಾನು

ದೆಹಲಿ ‘ರಿಪಬ್ಲಿಕ್ ಡೇ‘ ಪರೇಡ್ ಗೆ ಆಯ್ಕೆಯಾದ ಪುತ್ತೂರಿನ ಡಾ. ವಜೀದಾ ಬಾನು

 


ಮಂಗಳೂರು: 2023 ನೇ ಸಾಲಿನ ದೆಹಲಿ ಗಣರಾಜ್ಯೋತ್ಸವ ಪರೇಡ್ನಲ್ಲಿ ಭಾಗವಹಿಸಲು ಪುತ್ತೂರಿನ ಡಾ| ವಜೀದಾ ಬಾನು ಆಯ್ಕೆಯಾಗಿದ್ದಾರೆ. ಎನ್ ಎಸ್ ಎಸ್ ವತಿಯಿಂದ ನಡೆದ ದಕ್ಷಿಣ ಪ್ರಾಂತೀಯ ಪ್ರೀ ಆರ್ ಡಿ ತರಬೇತಿ ಶಿಬಿರದಲ್ಲಿ ಕರ್ನಾಟಕದಿಂದ ಆಯ್ಕೆಗೊಂಡಿರುವ  ಏಳು ಮಂದಿಯಲ್ಲಿ ಇವರು ಒಬ್ಬರಾಗಿದ್ದಾರೆ. 

ವಜೀದಾ ಬಾನು ಇವರು ಪುತ್ತೂರು ಅಂಬಿಕಾ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿಯಾಗಿದ್ದು, ಪುತ್ತೂರಿನ ಮೊಟ್ಟೆತ್ತಡ್ಕ  ಇಸ್ಮಾಯಿಲ್ ಮತ್ತು ಸುಫಿಯಾ ಬಾನು ದಂಪತಿಗಳ ಪುತ್ರಿಯಾಗಿದ್ದಾರೆ. ಪ್ರಸ್ತುತ ಎ.ಜೆ. ದಂತ ವೈದ್ಯಕೀಯ ಕಾಲೇಜಿನಲ್ಲಿ ದಂತ ವೈದ್ಯಕೀಯ ಪದವಿ ಪಡೆದಿರುತ್ತಾರೆ.

ಡಾ. ವಜೀದಾ ಬಾನು

ಪುತ್ತೂರು ಕಮ್ಯುನಿಟಿ ಸೆಂಟರ್ ನಲ್ಲಿ ಡಾ. ವಜೀದಾ ಸಂವಾದ

ಇತ್ತೀಚೆಗೆ ನಡೆದ ಪದವಿ ಪ್ರದಾನ ಸಮಾರಂಭದಲ್ಲಿ ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯದ ಸಾಲಿನಲ್ಲಿ ಆರು ವಿಷಯಗಳಲ್ಲಿ ರ್ಯಾಂಕ್ ಪಡೆದಿರುತ್ತಾರೆ. ಪುತ್ತೂರು ಕಮ್ಯೂನಿಟಿ ಸೆಂಟರ್ ಕೌನ್ಸಿಲರ್ ಆಗಿರುವ ಇವರು ಹಲವಾರು ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ, ಪ್ರೇರಣೆ ನೀಡಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸುತ್ತಿದ್ದಾರೆ ಎಂದು ಪುತ್ತೂರು ಕಮ್ಯೂನಿಟಿ ಸೆಂಟರ್ ಪ್ರಧಾನ ಕಾರ್ಯದರ್ಶಿ ಹನೀಫ್ ಪುತ್ತೂರು ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article