ಕಮಲಾಕ್ಷಿ ಸೊಸೈಟಿಯಲ್ಲಿ ನೂರಾರು ಕೋಟಿ ರೂ. ಹಗರಣ: ಅಧ್ಯಕ್ಷ ಲಕ್ಷ್ಮೀ ನಾರಾಯಣ ಬಂಧನ
Thursday, December 29, 2022
ಉಡುಪಿ: ಠೇಣಿದಾರರಿಗೆ ನೂರಾರು ಕೋಟಿ ರೂ. ವಂಚಿಸಿ ತಲೆಮರೆಸಿಕೊಂಡಿದ್ದ ಉಡುಪಿಯ ಕಮಲಾಕ್ಷಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಬಿ.ವಿ. ಲಕ್ಷ್ಮೀ ನಾರಾಯಣ ಉಪಾಧ್ಯಾಯ ಎಂಬಾತನನ್ನು ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ಬುಧವಾರ ತಡರಾತ್ರಿ ಬಂಧಿಸಿದ್ದಾರೆ.
ಆರೋಪಿ ಲಕ್ಷ್ಮೀನಾರಾಯಣ ಹೆಚ್ಚಿನ ಬಡ್ಡಿಯ ಆಮಿಷವೊಡ್ಡಿ ಹಲವಾರು ಮಂದಿಯಿಂದ ಕೋಟ್ಯಾಂತರ ರೂ. ಸಂಗ್ರಹಿಸಿ, ಹಿಂದಿರುಗಿಸದೆ ವಂಚಿಸಿದ್ದನು. ಈ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಹಲವು ಠೇವಣಿದಾರರು ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ತನಿಖೆಗೆ ಇಳಿದ ಸೆನ್ ಪೊಲೀಸರು ಬ್ರಹ್ಮಾವರದ ಮಟಪಾಡಿ ಎಂಬಲ್ಲಿ ಆರೋಪಿ ಲಕ್ಷ್ಮೀನಾರಾಯಣನನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.