MANGALORE: ಕಟೀಲು ದೇಗುಲದಲ್ಲಿ ವಾಹನ ಪಾರ್ಕಿಂಗ್ ಶುಲ್ಕ ಕಡ್ಡಾಯ: ಭಕ್ತರ ಆಕ್ರೋಶ
Tuesday, January 3, 2023
ಮಂಗಳೂರು: ಕಟೀಲು ದೇವಸ್ಥಾನದ ಆವರಣದಲ್ಲಿ ವಾಹನ ಪಾರ್ಕಿಂಗ್ ಶುಲ್ಕವನ್ನು ನಿಗದಿ ಮಾಡಲಾಗಿದ್ದು, ಭಕ್ತರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇವಳದ ಆವರಣದಲ್ಲಿ ವಾಹನ ಪಾರ್ಕಿಂಗ್ ಮಾಡಿದರೆ ಘನ ವಾಹನಗಳ ಪಾರ್ಕಿಂಗ್ ಶುಲ್ಕ 50 ರೂಪಾಯಿ ಮತ್ತು ದ್ವಿಚಕ್ರ ವಾಹನಗಳ ಶುಲ್ಕ 20 ರೂಪಾಯಿ ಹಣ ನೀಡಬೇಕು ಎಂದು ದೇವಳದ ಆಡಳಿತ ಮಂಡಳಿ ತಿಳಿಸಿದೆ.
ಇನ್ನು ದೇವಳದ ಆಡಳಿತ ಮಂಡಳಿಯ ಈ ನಿರ್ಧಾರಕ್ಕೆ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಇಂತಹ ಅಗತ್ಯವಿಲ್ಲದ ನಿರ್ಧಾರಗಳನ್ನ ಕೂಡಲೇ ಹಿಂಪಡೆಯಬೇಕೆಂದು ಒತ್ತಾಯಿಸಿದ್ದಾರೆ.
ಇನ್ನು ಈ ಹಿಂದೆಯೊಮ್ಮೆ ಕಟೀಲು ದೇಗುಲದಲ್ಲಿ ವಾಹನ ಪಾರ್ಕಿಂಗ್ ಗೆ ಹಣ ನೀಡುವಂತೆ ಬ್ಯಾನರ್ ಅಳವಡಿಸಿದ್ದರು. ಇದಕ್ಕೆ ಭಕ್ತರು ಆಕ್ರೋಶಪಡಿಸಿದ ಬೆನ್ನಲ್ಲೇ ದೇವಸ್ಥಾನದ ಆಡಳಿತ ಮಂಡಳಿ ತಾತ್ಕಾಲಿಕವಾಗಿ ಮುಂದೂಡಲಾಗಿತ್ತು. ಇದೀಗ ಮತ್ತೆ ಈ ವಾಹನ ಪಾರ್ಕಿಂಗ್ ಶುಲ್ಕ ಮುನ್ನೆಲೆಗೆ ಬಂದಿದ್ದು, ಮತ್ತೆ ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ.

