PTR: ಫೆ.11 ಪುತ್ತೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ!!
Tuesday, January 31, 2023
ಪುತ್ತೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಫೆ.11ರಂದು ಪುತ್ತೂರಿಗೆ ಆಗಮಿಸಲಿದ್ದು, ವಿವಿಧ ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗಯಾಗಲಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ.
ಮೊದಲಿಗೆ ವಿವೇಕಾನಂದ ಕಾಲೇಜಿನಲ್ಲಿ ನಡೆಯಲಿರುವ `ಕೃಷಿ ಯಂತ್ರ ಮೇಳ ಹಾಗೂ ಕನಸಿನ ಮನೆ' ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ. ಆ ಬಳಿಕ ವಿವೇಕಾನಂದ ತೆಂಕಿಲದ ಕ್ರೀಡಾಂಗಣದಲ್ಲಿ ಬೃಹತ್ ಸಭೆಯೊಂದು ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಸಭೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸೇರಿದಂತೆ ಬಿಜೆಪಿ ಸಚಿವರು, ಶಾಸಕರು ಹಾಗೂ ಮುಂಬರುವ ಚುನಾವಣೆಯ ಟಿಕೆಟ್ ಆಕಾಂಕ್ಷಿಗಳು ಭಾಗಿಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಇನ್ನು ಈ ಕಾರ್ಯಕ್ರಮಗಳ ಜೊತೆ ಜೊತೆಗೆ ಪುತ್ತೂರಿನ ಹೊರವಲಯದ ಹನುಮಗಿರಿ ಶಾಲೆಯೊಂದರಲ್ಲಿ ನಡೆಯುವ ಕಾರ್ಯಕ್ರಮದಲ್ಲೂ ಭಾಗಿಯಾಗಲಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ.
