PTR: ಜ.22ರಂದೇ ಆರ್‌ಎಸ್‌ಎಸ್ ಕೇಡರ್ ಅಶೋಕ್ ರೈ ಕಾಂಗ್ರೆಸ್ ಸೇರ್ಪಡೆ!!
Thursday, January 19, 2023
ಪುತ್ತೂರು: ಆರ್‌ಎಸ್‌ಎಸ್ ಕೇಡರ್ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಜ.22ರಂದು ಸಾವಿರಾರು ಜನರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದೆ.
ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಸಂಜೆ 4 ಗಂಟೆಗೆ ನಡೆಯಲಿರುವ ಕಾಂಗ್ರೆಸ್ ನ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಅವರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ನೇತೃತ್ವದಲ್ಲಿ ಅಶೋಕ್ ರೈ ಅವರು ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ.
ಇನ್ನು ಈ ಕಾರ್ಯಕ್ರಮಕ್ಕೆ ಸುಮಾರು 50000 ಸಾವಿರ ಜನ ಭಾಗವಹಿಸುವ ಸಾಧ್ಯತೆ ಇದೆ. ಅಶೋಕ್ ರೈ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಂತೆ ಪುತ್ತೂರಿನ ಕಾಂಗ್ರೆಸ್ ನಲ್ಲಿ ಯಾವ ಮಟ್ಟದ ಬೆಳವಣಿಗೆ ಆಗುತ್ತೆ ಅನ್ನೋದನ್ನ ಕಾದು ನೋಡಬೇಕಿದೆ. ಅಶೋಕ್ ರೈ ಕೋಡಿಂಬಾಡಿ ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ಪುತ್ತೂರು ಬಿಜೆಪಿ ವಲಯದಲ್ಲಿ ಭಾರೀ ಸಂಚಲನ ಸೃಷ್ಠಿಸಿದೆ.