TERROR: ಪಿಎ ಎಂಜಿನಿಯರಿಂಗ್ ಕಾಲೇಜಿಗೆ ಎನ್ಐಎ ದಾಳಿ!!
ಮಂಗಳೂರು: ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಹೊರವಲಯದ ಪಿಎ ಎಂಜಿನಿಯರಿಂಗ್ ಕಾಲೇಜಿಗೆ ಎನ್ಐಎ ಅಧಿಕಾರಿಗಳು ದಾಳಿ ಮಾಡಿದ್ದು, ಅಂತಿಮ ವರ್ಷದ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯನ್ನ ವಶಕ್ಕೆ ಪಡೆದಿದ್ದಾರೆ.
ಉಡುಪಿ ಮೂಲದ ವಿದ್ಯಾರ್ಥಿ ರಿಹಾನ್ ಶೇಖ್ ಎಂಬಾತನನ್ನು ವಶಕ್ಕೆ ಪಡೆದಿರುವ ಎನ್ಐಎ, ಬಂಧನದಲ್ಲಿರುವ ಶಂಕಿತ ಉಗ್ರ ಶಾರೀಕ್ ವಿಚಾರಣೆ ಬಳಿಕ ಮಂಗಳೂರಿನ ಪಿಎ ಎಂಜಿನಿಯರಿಂಗ್ ಮೇಲೆ ಈ ದಾಳಿ ನಡೆದಿದೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿ ಶಿವಮೊಗ್ಗ ಪೊಲೀಸರು ಮಾಝ್ ಮುನೀರ್ ಎಂಬಾತನನ್ನು ಕೂಡ ವಶಕ್ಕೆ ಪಡೆದಿದ್ದರು. ಈತ ನಗರದ ಬಲ್ಮಠದಲ್ಲಿ ವಾಸವಾಗಿದ್ದುಕೊಂಡು ಪಿಎ ಎಂಜಿನಿಯರಿಂಗ್ ಕಾಲೇಜಿನ ವ್ಯಾಸಾಂಗ ಮಾಡುತ್ತಿದ್ದ. ಈತನ ಜೊತೆಗೆ ರಿಹಾನ್ ಶೇಖ್ ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾನೆ ಎಂಬ ವಿಚಾರವಾಗಿ ಇಂದು ಪಿಎ ಎಂಜಿನಿಯರಿಂಗ್ ಕಾಲೇಜಿನ ಮೇಲೆ ಎನ್ಐಎ ದಾಳಿ ಮಾಡಿದೆ. ಸದ್ಯ ಏಳು ಮಂದಿಯ ಎನ್ ಐಎ ಅಧಿಕಾರಿಗಳು ಬಂಧಿತ ರಿಹಾನ್ ಶೇಖ್ ನನ್ನ ತೀವ್ರ ವಿಚಾರಣೆ ಮಾಡುತ್ತಿದ್ದಾರೆ. ಇನ್ನು ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟಕ್ಕೂ ಈತನಿಗೂ ನಂಟು ಇದೆಯಾ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.