-->
ಮಂಗಳೂರು: ಖಾಸಗಿ ಮೆಡಿಕಲ್ ಕಾಲೇಜು ವೈದ್ಯರ ಡ್ರಗ್ ಜಾಲ ಬಯಲು; ವಿದ್ಯಾರ್ಥಿನಿಯರ ಸಹಿತ ಹತ್ತು ಮಂದಿ ಅಂದರ್!

ಮಂಗಳೂರು: ಖಾಸಗಿ ಮೆಡಿಕಲ್ ಕಾಲೇಜು ವೈದ್ಯರ ಡ್ರಗ್ ಜಾಲ ಬಯಲು; ವಿದ್ಯಾರ್ಥಿನಿಯರ ಸಹಿತ ಹತ್ತು ಮಂದಿ ಅಂದರ್!


ಮಂಗಳೂರು: ಮಹತ್ವದ ಕಾರ್ಯಾಚರಣೆಯಲ್ಲಿ ಮಂಗಳೂರು ನಗರ ಪೊಲೀಸರು ವೈದ್ಯಕೀಯ ಕಾಲೇಜಿನ ವೈದ್ಯರು, ವೈದ್ಯ ವಿದ್ಯಾರ್ಥಿನಿಯರನ್ನು ಅರೆಸ್ಟ್ ಮಾಡಿ ಅವರಿಂದ ಗಾಂಜಾ ಹಾಗೂ ಇನ್ನಿತರ ಸೊತ್ತುಗಳನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.

ಬಂಧಿತ ಆರೋಪಿಗಳು ಮಂಗಳೂರಿನ ಪ್ರತಿಷ್ಠಿತ ಕೆ.ಎಂ.ಸಿ ಅತ್ತಾವರ, ಕೆ.ಎಂ.ಸಿ ಮಣಿಪಾಲ, ಯೆನೇಪೋಯಾ ದೇರಳಕಟ್ಟೆ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಮತ್ತು ವೈದ್ಯರಾಗಿರುವುದಾಗಿ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ನಾಲ್ವರು ವೈದ್ಯಕೀಯ ವಿದ್ಯಾರ್ಥಿನಿಯರು, ಇಬ್ಬರು ವೈದ್ಯರು, ಇಬ್ಬರು ವಿದ್ಯಾರ್ಥಿಗಳು ಸೇರಿ ಒಟ್ಟು 10 ಜನರ ಬಂಧನವಾಗಿದ್ದು, ಇವರೆಲ್ಲರೂ ಡ್ರಗ್ ಪೆಡ್ಲರ್ ಗಳ ಜೊತೆ ನಿರಂತರ ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.










ಆರಂಭದಲ್ಲಿ ಯು.ಕೆ ಮೂಲದ ಗಾಂಜಾ ಪೆಡ್ಲರ್ ನೀಲ್ ಕಿಶೋರಿಲಾಲ್ ರಾಮ್ ಜೀ(38) ವಶಕ್ಕೆ ಪಡೆದಿದ್ದ ಪೊಲೀಸರು ಆತ ನೀಡಿದ ಮಾಹಿತಿಯಂತೆ ಹತ್ತು ಮಂದಿಯನ್ನು ಅರೆಸ್ಟ್ ಮಾಡಿದ್ದಾರೆ. ವಿದ್ಯಾರ್ಥಿನಿಯರಾದ ಡಾ. ನದಿಯಾ ಸಿರಾಜ್(24), ಡಾ.ವರ್ಷಿಣಿ ಪ್ರತಿ(26), ಡಾ.ರಿಯಾ ಚಡ್ಡ(22), ಡಾ.ಹೀರಾ ಬಸಿನ್(23) ವೈದ್ಯ ಡಾ.ಸಮೀರ್(32), ಮಣಿಮಾರನ್ ಮುತ್ತು(28), ಸ್ಥಳೀಯ ಮಹಮ್ಮದ್ ರವೂಪ್ ಅಲಿಯಾಸ್ ಗೌಸ್(34) ವಿದ್ಯಾರ್ಥಿಗಳಾದ ಡಾ. ಭಾನು ದಹಿಯಾ(27), ಡಾ.ಕ್ಷಿತಿಜ್ ಗುಪ್ತ(23) ಎಂಬವರನ್ನು ಬಂಧಿಸಲಾಗಿದೆ.

ಬಂಧಿತರಿಂದ ಎರಡು ಕೆ.ಜಿಗಾಂಜಾ, ಒಂದು ನಕಲಿ ಪಿಸ್ತೂಲ್, ಡ್ರಾಗರ್ ವಶಕ್ಕೆ ಪಡೆಯಲಾಗಿದ್ದು, ಬಂಧಿತರ ವಿರುದ್ಧ ಗಾಂಜಾ ಸೇವನೆ ಹಾಗೂ ಪೆಡ್ಲಿಂಗ್ ಆರೋಪದಡಿ ಬಂಧಿಸಲಾಗಿದೆ.

Ads on article

Advertise in articles 1

advertising articles 2

Advertise under the article