ಕಾಪು: ಚೂರಿಯಿಂದ ಇರಿದು ಯುವಕನ ಹತ್ಯೆಗೈದ ದುಷ್ಕರ್ಮಿಗಳು!
Sunday, February 5, 2023
ಉಡುಪಿ: ಭೂ ವ್ಯವಹಾರ ನಡೆಸುತ್ತಿದ್ದ ವ್ಯಕ್ತಿಯೋರ್ವನನ್ನು ಚೂರಿಯಿಂದ ಇರಿದು ಹತ್ಯೆಗೈದಿರುವ ಘಟನೆ ಕಾಪು ಠಾಣಾ ವ್ಯಾಪ್ತಿಯ ಪಾಂಗಾಳ ಎಂಬಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಶರತ್ ಶೆಟ್ಟಿ (39) ಎಂದು ಗುರುತಿಸಲಾಗಿದೆ. ಇವರನ್ನು ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳಿಂದ ಚೂರಿಯಿಂದ ಇರಿದು ಹಲ್ಲೆ ನಡೆಸಿದ್ದಾಗಿ ತಿಳಿದು ಬಂದಿದೆ. ಗಾಯಾಳು ಶರತ್ ಶೆಟ್ಟಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ದೌಡಾಯಿಸಿರುವ ಕಾಪು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಭೂ ವ್ಯವಹಾರ ಹಿನ್ನೆಲೆ ಕೊಲೆ ಶಂಕೆ ವ್ಯಕ್ತವಾಗಿದೆ.