ಬಸ್-ಕಾರು ನಡುವೆ ಭೀಕರ ಅಪಘಾತ; ಮಗು ಸಾವು, ನಾಲ್ವರು ಗಂಭೀರ
Monday, February 13, 2023
ಕಡಬ: ಕೆಎಸ್ ಆರ್ ಟಿಸಿ ಬಸ್ ಹಾಗೂ ಕಾರು ನಡುವೆ ಉಂಟಾದ ಅಪಘಾತದಲ್ಲಿ ಮಗು ಮಥಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳದಲ್ಲಿ ನಡೆದಿದೆ.
ಪರಿಣಾಮ ಕಾರಿನಲ್ಲಿದ್ದ ಮಗು ಮೃತಪಟ್ಟಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕಾರಿನಲ್ಲಿದ್ದವರು ಬೆಂಗಳೂರು ಮೂಲದವರೆಂದು ತಿಳಿದುಬಂದಿದೆ.