ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಸಾವು
Thursday, March 30, 2023
ಮಂಗಳೂರು: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಎಡಮಂಗಲ ಗ್ರಾಮದಲ್ಲಿ ನಡೆದಿದೆ.
ಮೃತರನ್ನ ಹೆಸರಾಂತ ದೈವ ನರ್ತಕ ಕಾಂತು ಅಜಿಲ ಮೂಲಂಗೀರಿ ಎಂದು ಗುರುತಿಸಲಾಗಿದೆ. ಹಲವಾರು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿದಂತೆ ದೈವರಾಧಕರಾಗಿ ಗ್ರಾಮ ದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು. ನಿನ್ನೆ ಎಡಮಂಗಲದ ಇಡ್ಯಡ್ಕದಲ್ಲಿ ಗ್ರಾಮಕ್ಕೆ ಸಂಬಂಧಿಸಿ ನೇಮೋತ್ಸವ ನಡೆಯುತ್ತಿತ್ತು, ಈ ವೇಳೆ ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದಿದ್ದಾರೆ. ತಕ್ಷಣ ಆಸ್ಪತ್ರೆಗೆ ಕೊಂಡೊಯ್ದರೂ ಫಲ ನೀಡಲಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ.