ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ!!
Friday, March 31, 2023
ಮಂಗಳೂರು: ನಗರದ ಕೆ ಎಸ್ ರಾವ್ ಬಳಿ ಇರುವ ಖಾಸಗಿ ಹೋಟೆಲ್ ನ ಲಾಡ್ಜ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೈಸೂರು ಮೂಲದ ದೇವೇಂದ್ರ ಮತ್ತು ಅವರ ಪತ್ನಿ ಸಹಿತ ಇಬ್ಬರು ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ನಗರದ ಲಾಡ್ಜ್ ನಲ್ಲಿ ಕೊಠಡಿಯೊಂದನ್ನು ಬಾಡಿಗೆ ಪಡೆದಿದ್ದರು. ದೇವೇಂದ್ರ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿ ಮತ್ತು ಇಬ್ಬರು ಮಕ್ಕಳು ಮಲಗಿದ ಸ್ಥಿತಿಯಲ್ಲೇ ಶವವಾಗಿ ಪತ್ತೆಯಾಗಿದ್ದಾರೆ. ಇನ್ನು ಸಾಯುವ ಮುನ್ನ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.