ಮಂಗಳೂರು: ಜ್ಯುವೆಲ್ಲರಿ ಸಿಬ್ಬಂದಿ ಹತ್ಯೆ ಪ್ರಕರಣ; ಆರೋಪಿ ಶಿಫಾಝ್ ಗೆ 12 ದಿನ ಕಸ್ಟಡಿ
Friday, March 3, 2023
ಮಂಗಳೂರು: ಚಿನ್ನಾಭರಣ ಅಂಗಡಿ ಸಿಬ್ಬಂದಿಯ ಕೊಲೆ ಪ್ರಕರಣದ ಆರೋಪಿ ಶಿಫಾಝ್ ನನ್ನು ಹೆಚ್ಚಿನ ವಿಚಾರಣೆಗಾಗಿ 12 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿ ಜಿಲ್ಲಾ ಸತ್ರ ನ್ಯಾಯಾಲಯ ಆದೇಶಿಸಿದೆ.
2023ರ ಫೆ.3 ರಂದು ಮಂಗಳೂರು ಜ್ಯುವೆಲರ್ಸ್ ಹೆಸರಿನ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ರಾಘವೇಂದ್ರ ಆಚಾರ್ಯ ಎಂಬುವವರನ್ನು ಅಪರಿಚಿತ ವ್ಯಕ್ತಿಯೊಬ್ಬ ಹತ್ಯೆ ಮಾಡಿದ್ದನು.
ಈ ಬಗ್ಗೆ ಸಿಸಿಟಿವಿ ಕ್ಯಾಮೆರಾ, ಟವರ್ ಲೊಕೇಶನ್ ಹಾಗೂ ಇತರ ಮೂಲಗಳ ಸಹಾಯದಿಂದ ಆರೋಪಿಯನ್ನು ಕಾಸರಗೋಡಿನಲ್ಲಿ ಬಂಧಿಸಲಾಗಿತ್ತು.
ಆರೋಪಿ ಕೊಲೆ ನಡೆಸಿ ತನ್ನ ಸ್ವಗ್ರಾಮ ಕೋಝಿಕ್ಕೋಡ್‌ಗೆ ತೆರಳಿ ತಲೆಮರೆಸಿಕೊಂಡಿದ್ದ. ಸದ್ಯ ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ 12 ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.