ಮೂಡುಬಿದಿರೆಯಲ್ಲಿ ಭೀಕರ ರಸ್ತೆ ಅಪಘಾತಕ್ಕೆ ವಿದ್ಯಾರ್ಥಿ ಬಲಿ
Wednesday, June 7, 2023
ಮೂಡುಬಿದಿರೆ: ಖಾಸಗಿ ಬಸ್ ವೇಗವಾಗಿ ಓವರ್ ಟೇಕ್ ಮಾಡಿಕೊಂಡು ಬಂದು ಮುಂಭಾಗದಲ್ಲಿ ಬರುತ್ತಿದ್ದ ಬೈಕ್ ಗ್ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೂಡುಬಿದಿರೆಯ ಎಡಪದವು ಎಂಬಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನ ಕಾರ್ತಿಕ್ ಆಚಾರ್ಯ ಎಂದು ಗುರುತಿಸಲಾಗಿದೆ. ಇನ್ನು ಬಸ್ ಚಾಲಕನ ಅಜಾಗರೂಕತೆಯ ಚಾಲನೆಗೆ ಸಾರ್ವಜನಿಕರು ಆಕ್ರೋಶಗೊಂಡು ಎಡಪದವು ಜಂಕ್ಷನ್ ನಲ್ಲಿ ರಸ್ತೆ ತಡೆ ಮಾಡಿದ್ರು. ಘಟನೆ ನಿನ್ನೆ ಸಂಜೆ ವೇಳೆಗೆ ನಡೆದಿದ್ದು, ಖಾಸಗಿ ಬಸ್ ಗಳಿಗೆ ಕಡಿವಾಣ ಹಾಕಲು ಸಾರ್ವಜನಿಕರು ಒತ್ತಾಯ ಮಾಡಿದ್ದಾರೆ.
ಅಪಘಾತದ ದೃಶ್ಯ ಸಿಸಿಕ್ಯಾಮಾರದಲ್ಲಿ ಸೆರೆಯಾಗಿದ್ದು, ಬಸ್ ಚಾಲಕನ ಅಜಾಗೂರತೆಯ ಚಾಲನೆ ಎದ್ದು ಕಾಣುತ್ತಿದೆ.