ಅರುಣ್ ಪುತ್ತಿಲಗೆ ಬಿಜೆಪಿ ರಾಜ್ಯಾಧ್ಯಕ್ಷರ ಟಾಂಗ್...!!!
Friday, July 14, 2023
ಪುತ್ತೂರು: ಯಾರೆಲ್ಲ ಪಕ್ಷಕ್ಕೆ ಸೇರ್ಪಡೆಯಾಗಬೇಕು ಅನ್ನೋದನ್ನ ಮುಂದಿನ ದಿನಗಳಲ್ಲಿ ರಾಷ್ಟ್ರೀಯ ನಾಯಕರು ತೀರ್ಮಾನಿಸುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಪರೋಕ್ಷವಾಗಿ ಹಿಂದೂ ಮುಖಂಡ ಅರುಣ್ ಪುತ್ತಿಲಗೆ ಟಾಂಗ್ ನೀಡಿದ್ದಾರೆ. ಪುತ್ತೂರಿನಲ್ಲಿ ಬಿಜೆಪಿ ಹಾಗೂ ಪುತ್ತಿಲ ಬಣದ ಸಮಸ್ಯೆ ವಿಚಾರವಾಗಿ ಮಾತನಾಡಿದ ಅವ್ರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರೂ ಬೇಕಾದ್ರೂ ಚುನಾವಣೆಗೆ ಸ್ಪರ್ಧಿಸಬಹುದು. ಹಾಗಾಗಿ ಅದಕ್ಕೆ ಯಾರೂ ಕೂಡಾ ವಿರೋಧ ಮಾಡುವಂತಿಲ್ಲ. ಪುತ್ತೂರಿನಲ್ಲಿ ಗ್ರಾಮ ಪಂಚಾಯತ್ ಉಪಚುನಾವಣೆಗೆ ಬಿಜೆಪಿ ಸ್ಪರ್ಧಿಸಲಿದೆ ಎಂದು ಹೇಳಿದರು.