-->
ನೈತಿಕ ಪೊಲೀಸ್ ಗಿರಿ ಕ್ರಿಮಿಗಳು ಬಾಲ ಬಿಚ್ಚಿದ್ರೆ ಗಡಿಪಾರು...!!!

ನೈತಿಕ ಪೊಲೀಸ್ ಗಿರಿ ಕ್ರಿಮಿಗಳು ಬಾಲ ಬಿಚ್ಚಿದ್ರೆ ಗಡಿಪಾರು...!!!

 


ಮಂಗಳೂರು: ದ.ಕ. ಜಿಲ್ಲೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ನೈತಿಕ ಪೊಲೀಸ್ ಗಿರಿ ಪ್ರಕರಣದ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

 ಮಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವ್ರು, ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡೋದಿಲ್ಲ. ಕಾನೂನನ್ನ ಕೈಗೆ ತೆಗೆದುಕೊಳ್ಳೋದು, ಹಲ್ಲೆ ಮಾಡೋದು, ಭಯ ಸೃಷ್ಟಿಸೋದನ್ನು ಸಹಿಸಲು ಸಾಧ್ಯವಿಲ್ಲ. ಹಾಗಾಗಿ ಈ ಬಗ್ಗೆ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ರು. 

ಇನ್ನು ಜಿಲ್ಲೆಗೆ ಕೆಟ್ಟ ಹೆಸರು ತರಲು ಉದ್ದೇಶಪೂರ್ವಕವಾಗಿ ಕೋಮುವಾದಿ ಶಕ್ತಿಗಳು ಕೆಲಸ ಮಾಡುತ್ತಿದೆ. ವಿದ್ಯಾರ್ಥಿಗಳಿಗೆ ಮಂಗಳೂರಿಗೆ ವಿದ್ಯಾರ್ಜನೆಗೆ ಬರಲು ಭಯ ಆಗುತ್ತಿದೆ. ಅಡ್ಮಿಷನ್ ಆಗಿದೆ ಕಾಲೇಜಿಗೆ ಹೋಗಲು ಭಯ ಆಗುತ್ತಿದೆ ಅಂತಾ ವಿದ್ಯಾರ್ಥಿಗಳು ನನಗೆ ಹೇಳುತ್ತಿದ್ದಾರೆ. ಭಯ ಪಡಬೇಡಿ ಅಂತಾ ವಿದ್ಯಾರ್ಥಿಗಳನ್ನ ಕಳುಹಿಸಿದ್ದೇನೆ. ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಈ ಕೆಲಸ ನಡೆಯುತ್ತಿದೆ. ಈ ಕೆಲಸಕ್ಕೆಲ್ಲ ಮತೀಯವಾದಿ ಶಕ್ತಿಗಳು ಸೇರಿಕೊಳ್ಳುತ್ತಿದೆ. ಹಾಗಾಗಿ ಇಂತಹ ಕೆಲಸ ಮಾಡುವವರನ್ನ ಗಡಿಪಾರು ಮಾಡುತ್ತೇವೆ. ಜೊತೆಗೆ ಇಂತಹ ಕ್ರಿಮಿಗಳಿಗೆ ಬಿಜೆಪಿ ಸಪೋರ್ಟ್ ಮಾಡುತ್ತಿದೆ. ಹಾಗಾದ್ರೆ ಬಿಜೆಪಿಗೆ ಜಿಲ್ಲೆಯಲ್ಲಿ ಸಾಮರಸ್ಯ ಇರೋದ ಬೇಡ್ವಾ? ಬಿಜೆಪಿ ಜಿಲ್ಲೆಯ ಶಾಂತಿಗೆ ಸಹಕಾರ ನೀಡಬೇಕು ಎಂದು ಹೇಳಿದರು. 

Ads on article

Advertise in articles 1

advertising articles 2

Advertise under the article