Mangaluru: Tv5 ವೀಡಿಯೋ ಜರ್ನಲಿಸ್ಟ್ ನಿಗೂಢ ಸಾವು; ಉನ್ನತ ಮಟ್ಟದ ತನಿಖೆಗೆ ಆಗ್ರಹ!
Sunday, July 28, 2024
ಮಂಗಳೂರು: ಟಿವಿ5 ವಿಡಿಯೋ ಜರ್ನಲಿಸ್ಟ್ ವಿರೇಶ್ ಕಡ್ಡಿ ಕೊಪ್ಲ ನಿಗೂಢ ಸಾವಿನ ಪ್ರಕರಣ ತನಿಖೆ
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮನವಿಗೆ ತಕ್ಷಣ ಸ್ಪಂದಿಸಿದ ಸ್ಪೀಕರ್ ಯು ಟಿ ಖಾದರ್, ಎಸಿಪಿ ಮಟ್ಟದ ಅಧಿಕಾರಿಯಿಂದ ತನಿಖೆ ನಡೆಸುವಂತೆ ಗದಗ ಎಸ್.ಪಿಗೆ ಸೂಚನೆ ನೀಡಿದ್ದಾರೆ.
Tv5 ವಿಡಿಯೋ ಜರ್ನಲಿಸ್ಟ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸದಸ್ಯ ವಿರೇಶ್ ಕಡ್ಡಿಕೊಪ್ಲ ಅವರ ನಿಗೂಢ ಸಾವಿನ ಕುರಿತು ಹಲವಾರು ಅನುಮಾನ ಗಳು ಇದ್ದು ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸ್ಪೀಕರ್ ಯು ಟಿ ಖಾದರ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪರವಾಗಿ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಸರ್ಕ್ಯುಟ್ ಹೌಸ್ ನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.
ಮನವಿಗೆ ತಕ್ಷಣ ಸ್ಪಂದಿಸಿದ ಸ್ಪೀಕರ್ ಯು ಟಿ ಖಾದರ್ ಗದಗ ಎಸ್ ಪಿ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ವಿರೇಶ್ ನಿಗೂಢ ಸಾವಿನ ಪ್ರಕರಣ ವನ್ನು ಗಂಭೀರವಾಗಿ ಪರಿಗಣಿಸಬೇಕು. ಸತ್ಯಾಸತ್ಯತೆ ಅರಿಯಲು ಎಸಿಪಿ ಮಟ್ಟದ ಅಧಿಕಾರಿಯಿಂದ ತನಿಖೆ ನಡೆಸುವಂತೆ ಸೂಚನೆ ನೀಡಿದರು.