ರಾಜ್ಯ ಸರ್ಕಾರಿ ನೌಕರರಿಗೆ ಬಿಗ್ ಶಾಕ್...
Friday, July 5, 2024
ಬೆಂಗಳೂರು: 7ನೇ ವೇತನ ಆಯೋಗದ ವರದಿ ಆಧಾರದ ಮೇಲೆ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಯಾವುದೇ ನಿರ್ಧಾರ ಕೈಗೊಂಡಿಲ್ಲ.
ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ 7ನೇ ವೇತನ ಆಯೋಗದ ವರದಿಯ ಶಿಫಾರಸುಗಳನ್ನು ಜಾರಿ ಮಾಡಲು ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸುವಂತೆ ಸರ್ಕಾರಿ ನೌಕರರು ಮನವಿ ಮಾಡಿದ್ದರು. ಇದಕ್ಕೆ ಸಿಎಂ ಕೂಡ ಭರವಸೆ ನೀಡಿದ್ದರು. ಆದ್ರೆ ಸಂಪುಟ ಸಭೆಯಲ್ಲಿ ವೇತನ ಪರಿಷ್ಕರಣೆ ಬಗ್ಗೆ ಯಾವುದೇ ನಿರ್ಧಾರವಾಗಿಲ್ಲ.ಇದರಿಂದಾಗಿ ಈ ಸಭೆಯಲ್ಲಿ ಆಯೋಗದ ವರದಿ ಶಿಫಾರಸಿನ ಅನ್ವಯ ವೇತನ ಪರಿಷ್ಕರಣೆ ನಿರೀಕ್ಷೆಯಲ್ಲಿದ್ದ ನೌಕರರಿಗೆ ನಿರಾಸೆಯುಂಟಾಗಿದೆ. ವೇತನ ಪರಿಷ್ಕರಣೆ ಬಗ್ಗೆ ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆಯಾಗಿಲ್ಲವೆಂದು ಹೇಳಲಾಗಿದೆ.