
Puttur: ಅರುಣ್ ಕುಮಾರ್ ಪುತ್ತಿಲ ಮೇಲೆ ಲೈಂಗಿಕ ದೌರ್ಜನ್ಯ ಕೇಸ್! ಬಿಜೆಪಿಯಿಂದ ಸಿಗುತ್ತಾ ಗೇಟ್‌ಪಾಸ್!?
ಪುತ್ತೂರು:
ಬಿಜೆಪಿ
ಹಾಗೂ ಪುತ್ತಿಲ ಪರಿವಾರದ ಪ್ರಮುಖ ಅರುಣ್ ಕುಮಾರ್ ಪುತ್ತಿಲ ಮೇಲೆ ಪುತ್ತೂರು ಮಹಿಳಾ ಠಾಣೆಯಲ್ಲಿ
ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಕೆಲ ದಿನಗಳ ಹಿಂದಷ್ಟೇ ಮಹಿಳೆಯೊಬ್ಬರ ಜೊತೆ ಆಡಿದ್ದ ಆಡಿಯೋವೊಂದು
ವೈರಲ್ ಆಗಿ ಸಂಚಲನ ಮೂಡಿಸಿತ್ತು. ಇದೀಗ ಲೈಂಗಿಕ ದೌರ್ಜನ್ಯದ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಅರುಣ್
ಕುಮಾರ್ ಪುತ್ತಿಲ ಮೇಲೆ ದಾಖಲಾದ ಎಫ್‌ಐಆರ್ ಪ್ರತಿ ʼದಿ ನ್ಯೂಸ್ ಅವರ್ʼಗೆ ಲಭ್ಯವಾಗಿದೆ.
ಅರುಣ್ ಕುಮಾರ್ ಪುತ್ತಿಲ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಹೊರಿಸಿರುವ ಮಹಿಳೆ, ತನಗೆ ಪುತ್ತಿಲರು ಬೆಂಗಳೂರಿನ ಪೈ ವಿಸ್ತಾ ಹೋಟೆಲ್‌ನಲ್ಲಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ದೂರು ನೀಡಿದ್ದಾರೆ. ಇದು ಕಳೆದ ವರ್ಷ ವಿಧಾನಸಭೆ ಚುನಾವಣೆಯ ಬಳಿಕ ನಡೆದ ಘಟನೆ ಎಂದು ತಿಳಿದು ಬಂದಿದೆ. 2023ರ ಜೂನ್ ತಿಂಗಳಲ್ಲಿ ನಡೆದಿದ್ದಾಗಿ ಹೇಳಲಾಗಿದೆ. ಆರೋಪಿ ಅರುಣ್ ಕುಮಾರ್ ಪುತ್ತಿಲ ಲೈಂಗಿಕ ದೌರ್ಜನ್ಯದ ವೀಡಿಯೋ, ಫೋಟೋ, ಸೆಲ್ಫಿಗಳನ್ನು ದಾಖಲಿಸಿಕೊಂಡಿದ್ದು ಬ್ಲ್ಯಾಕ್ ಮೇಲ್ ಮಾಡಿದ್ದಾಗಿಯೂ ದೂರುದಾರೆ 47 ವರ್ಷದ ಸಂತ್ರಸ್ತೆ ಆರೋಪಿಸಿದ್ದಾರೆ.
ದೂರು ದಾಖಲಿಸಿಕೊಂಡಿರುವ
ಪುತ್ತೂರು ಮಹಿಳಾ ಠಾಣಾ ಪೊಲೀಸರು ಐಪಿಸಿ 417, 354ಎ, 506 ಪ್ರಕಾರ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
ಪುತ್ತಿಲ ಅವರ ಪ್ರಖ್ಯಾತಿ ಮತ್ತು ಹಿಂದುತ್ವದ ಪ್ರತಿಪಾದನೆಗೆ ಅಭಿಮಾನಿಯಾಗಿದ್ದ ಪುತ್ತಿಲ ಮಹಿಳೆ ಜಾಲತಾಣದಲ್ಲಿ
ಫಾಲೋ ಮಾಡುತ್ತಿದ್ದಾಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಕಳೆದ 2023ರ ವಿಧಾನಸಭೆ ಚುನಾವಣೆಯಲ್ಲಿ
ಅರುಣ್ ಕುಮಾರ್ ಪುತ್ತಿಲ ಅವರು ಬಿಜೆಪಿಗೆ ಬಂಡಾಯವಾಗಿ ಪಕ್ಷೇತರನಾಗಿ ಸ್ಪರ್ಧಿಸಿ ಗಮನ ಸೆಳೆದಿದ್ದರು.