-->
Puttur | ಅರಣ್ಯಾಧಿಕಾರಿ ಸಂಜೀವ ಪೂಜಾರಿ ಪೊಲೀಸ್ ವಶಕ್ಕೆ!

Puttur | ಅರಣ್ಯಾಧಿಕಾರಿ ಸಂಜೀವ ಪೂಜಾರಿ ಪೊಲೀಸ್ ವಶಕ್ಕೆ!

ಪುತ್ತೂರು: ಪಂಜ ಉಪವಲಯ ಅರಣ್ಯ ಅಧಿಕಾರಿ ಸಂಜೀವ ಪೂಜಾರಿ ಕಾಣಿಯೂರು ಅವರನ್ನು ಬೆಳ್ಳಾರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯುವತಿಯರು ಹಾಗೂ ಭಜನೆ ಕುರಿತು ಅವರು ಕೀಳುಮಟ್ಟದ ಹೇಳಿಕೆ ನೀಡಿದ್ದನ್ನ ವಿರೋಧಿಸಿ ಬೆಳ್ಳಾರೆ ಠಾಣೆಯಲ್ಲಿ ನಿನ್ನೆ ಪ್ರಕರಣ ದಾಖಲಾಗಿತ್ತು. ಇಂದು ಪುತ್ತೂರು ಡಿವೈಎಸ್ಪಿ ಕಚೇರಿ ಮುಂಭಾಗ ಹಿಂದೂ ಜಾಗರಣ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ ನಡೆದ ಬೆನ್ನಿಗೆ ಅವರನ್ನು ಬೆಳ್ಳಾರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಸಾಮಾಜಿಕ ಜಾಲತಾಣದಲ್ಲಿ ಆಡಿಯೋವೊಂದು ವೈರಲ್ ಆಗಿದ್ದು, ಅದರಲ್ಲಿ ಬಿಲ್ಲವ ಯುವತಿಯರ ಬಗ್ಗೆ ಸಂಜೀವ ಪೂಜಾರಿ ಕೀಳುಮಟ್ಟದ ಹೇಳಿಕೆ ನೀಡಿದ್ದಾಗಿ ಆರೋಪಿಸಲಾಗಿದೆ. ಸಂಜೀವ ಪೂಜಾರಿ ಬಂಧನಕ್ಕೆ ಇಂದು ಸಂಜೆಯವರೆಗೆ ಹಿಂಜಾವೇ ಗಡುವು ನೀಡಿತ್ತು.

Ads on article

Advertise in articles 1

advertising articles 2

Advertise under the article