Yellow Alert | ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಹಲವೆಡೆ ಇಂದು ಭಾರೀ ಮಳೆ!
Tuesday, October 15, 2024
ಮಂಗಳೂರು: ರಾಜ್ಯದ ಕರಾವಳಿ ಸೇರಿದಂತೆ ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯದಲ್ಲಿ ಮಂಗಳವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಈ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಿದೆ.
ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಬಳ್ಳಾರಿ ಜಿಲ್ಲೆಗಳಲ್ಲೂ ಗುಡುಗು ಸಹಿತ ಜೋರು ಮಳೆಯಾಗುವ ಸಂಭವ ಇದೆ ಎಂದು ಇಲಾಖೆ ಮಾಹಿತಿ ನೀಡಿದ್ದು, ಈ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವ ಇದೆ.
ಬೆಂಗಳೂರು ನಗರ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಇಲಾಖೆ ತಿಳಿಸಿದೆ.