-->
ಮಂಗಳೂರು: ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟಿಸಿದ ಹೋರಾಟಗಾರರ ವಿರುದ್ಧ ಕೇಸ್‌ ದಾಖಲು!

ಮಂಗಳೂರು: ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟಿಸಿದ ಹೋರಾಟಗಾರರ ವಿರುದ್ಧ ಕೇಸ್‌ ದಾಖಲು!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಸಿಪಿಐಎಂ ಕಾರ್ಯದರ್ಶಿ, ಟೋಲ್‌ ಗೇಟ್‌ ವಿರೋಧಿ ಹೋರಾಟ ಸಮಿತಿಯ ಸಂಚಾಲಕ ಮುನೀರ್‌ ಕಾಟಿಪಳ್ಳ ವಿರುದ್ಧ ಕಾವೂರು ಪೊಲೀಸ್‌ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲಾಗಿದೆ.

ಮಂಗಳವಾರ ಕೂಳೂರು ಸೇತುವೆ ಸಮೀಪದಲ್ಲಿ ನಂತೂರು, ಸುರತ್ಕಲ್‌ ರಾಷ್ಟ್ರೀಯ ಹೆದ್ದಾರಿ ದುರಸ್ತಿ, ಕೂಳೂರು ಸೇತುವೆ ಶೀಘ್ರ ಪೂರ್ಣಗೊಳಿಸುವಂತೆ ಬೇಡಿಕೆಯನ್ನಿರಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಆರಂಭದಲ್ಲಿ ಪ್ರತಿಭಟನೆಗೆ ಅನುಮತಿ ನಿರಾಕರಿಸಲಾಗಿತ್ತು. ಆದರೆ, ಪ್ರತಿಭಟನಾಕಾರರು ಯಾವುದೇ ಮೈಕ್‌, ಶಾಮಿಯಾನ ಬಳಸದೇ ಶಾಂತಿಯುತವಾಗಿ ಹೆದ್ದಾರಿ ಪಕ್ಕದಲ್ಲಿ ಪ್ರತಿಭಟನೆ ಆಯೋಜಿಸಿದ್ದರು. ಪ್ರತಿಭಟನೆ ಸಂದರ್ಭ ಮಾಧ್ಯಮಗಳಿಗೆ ಮಾತನಾಡಿದ್ದ ಮುನೀರ್‌ ಕಾಟಿಪಳ್ಳ ಅವರು ಪೊಲೀಸ್‌ ಕಮೀಷನರ್‌ ಅನುಪಮ್‌ ಅಗರ್ವಾಲ್‌ ಅವರ ಸರ್ವಾಧಿಕಾರಿ ಧೋರಣೆಯ ವಿರುದ್ಧ ಹರಿಹಾಯ್ದಿದ್ದರು.

ಪ್ರತಿಭಟನೆ ನಡೆದ ಬೆನ್ನಿಗೆ ಇದೀಗ ಕಾವೂರು ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ 189 (2), 190 ಸೆಕ್ಷನ್‌ ಅಡಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಎಫ್‌ಐಆರ್‌ನಲ್ಲಿ ಮುನೀರ್‌ ಕಾಟಿಪಳ್ಳ ಹಾಗೂ ಇತರರನ್ನು ಆರೋಪಿಗಳನ್ನಾಗಿಸಲಾಗಿದೆ.

Ads on article

Advertise in articles 1

advertising articles 2

Advertise under the article