Leopard Attack | ಕಿನ್ನಿಗೋಳಿ: ಹುಲ್ಲು ತರಲೆಂದು ಹೋದ ಕೃಷಿಕನ ಮೇಲೆ ಚಿರತೆ ದಾಳಿ; ಗಂಭೀರ ಗಾಯ!
Sunday, November 3, 2024
ಮುಲ್ಕಿ: ಬೆಳಿಗ್ಗೆ ಹುಲ್ಲು ಕತ್ತರಿಸಲೆಂದು ಹೋದ ಕೃಷಿಕನೋರ್ವನ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ಮಂಗಳೂರು ನಗರ ಹೊರವಲಯದ ಕಿನ್ನಿಗೋಳಿ ಸಮೀಪದ ಎಳತ್ತೂರು ಎಂಬಲ್ಲಿ ನಡೆದಿದೆ.
ಕಳೆದ ಒಂದು ವಾರದಿಂದ ಈ ಭಾಗದಲ್ಲಿ ಚಿರತೆ ಓಡಾಟದ ಬಗ್ಗೆ ಜನರು ಅಲರ್ಟ್ ಆಗಿದ್ದು, ಇಂದು ಬೆಳಿಗ್ಗೆ ಕಲ್ಕರೆ ನಿವಾಸಿ ಲಿಗೋರಿ ಎಂಬವರ ಮೇಲೆ ಏಕಾಏಕಿ ದಾಳಿ ನಡೆಸಿದೆ. ಪರಿಣಾಮ ಮುಖದ ಮೇಲೆ ಪರಚಿದ ಗಾಯಗಳಾಗಿವೆ. ಚಿರತೆ ದಾಳಿಯಿಂದ ತಪ್ಪಿಸಿಕೊಂಡು ಬಂದಿರುವ ಲಿಗೋರಿ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಎಳತ್ತೂರು ಭಾಗದಲ್ಲಿ ಅಪಾರ ಸಂಖ್ಯೆಯಲ್ಲಿ ಕೃಷಿಕರು ನೆಲೆಸಿದ್ದು ಇಂದು ಬೆಳಿಗ್ಗೆ ನಡೆದ ಚಿರತೆ ದಾಳಿ ಗ್ರಾಮಸ್ಥರನ್ನ ಭಯಭೀತರನ್ನಾಗಿಸಿದೆ. ಚಿರತೆಯನ್ನು ಸೆರೆ ಹಿಡಿಯುವಂತೆ ಸ್ಥಳೀಯರು ಅರಣ್ಯ ಇಲಾಖೆಗೆ ಒತ್ತಾಯಿಸಿದ್ದಾರೆ.