
PUTTUR: ಪುತ್ತೂರಿನ ತೆಂಕಿಲದಲ್ಲಿ ಭೀಕರ ಅಪಘಾತ!!
Thursday, December 12, 2024
ಪುತ್ತೂರು: ನಿಯಂತ್ರಣ ಕಳೆದುಕೊಂಡ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಪುತ್ತೂರಿನ ತೆಂಕಿಲ ವಿವೇಕಾನಂದ ಶಾಲಾ ಬಳಿ ನಡೆದಿದೆ.
ಉಡುಪಿ ನೋಂದಣಿಯ ಬ್ರೆಝಾ ಕಾರು ಪಲ್ಟಿಯಾಗಿದ್ದು, ಕಾರಿನಲ್ಲಿದ್ದವರು ಗಂಭೀರ ಗಾಯಗೊಂಡ ಬಗ್ಗೆ ಮಾಹಿತಿ ತಿಳಿದುಬಂದಿದೆ. ಸ್ಥಳೀಯರ ಸಹಾಯದಿಂದ ಗಾಯಗೊಂಡವರನ್ನ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಕಾರಿನಲ್ಲಿದ್ದವರು ಉಡುಪಿ ಮೂಲದವರೆಂದು ತಿಳಿದುಬಂದಿದ್ದು, ಕೆಲ ಪೂಜಾ ಸಾಮಗ್ರಿಗಳು ಸೇರಿದಂತೆ ಕುಂಕುಮ ಪ್ರಸಾಗಳು ಕಾರಿನೊಳಗೆ ಇದ್ದವು.