
PUTTUR: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಎಚ್ಚರಿಕೆಯ ಕರೆಗಂಟೆ!!
Saturday, January 18, 2025
ಪುತ್ತೂರು: ಬಿ.ಸಿ.ರೋಡ್-ಅಡ್ಡಹೊಳೆ ಚತುಷ್ಪತ ರಸ್ತೆ ಕಾಮಗಾರಿ ಆರಂಭಗೊಂಡು ಸರಿಸುಮಾರು ಎಂಟು ವರ್ಷಗಳೇ ಕಳೆದುಹೋಗಿದೆ. ಇಷ್ಟಾದ್ರು ಇನ್ನೂ ರಸ್ತೆ ಕಾಮಗಾರಿ ಪೂರ್ತಿಗೊಂಡಿಲ್ಲ. ಹಾಗಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವಿರುದ್ಧ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ರೊಚ್ಚಿಗೆದ್ದಿದ್ದಾರೆ.
ಹೌದು ಫೆಬ್ರವರಿ ತಿಂಗಳಾಂತ್ಯದ ಒಳಗೆ ಕಲ್ಲಡ್ಕ, ಮಾಣಿ, ಉಪ್ಪಿನಂಗಡಿ ಭಾಗದ ಕಾಮಗಾರಿ ಮುಗಿಸಿಕೊಡಬೇಕೆಂದು ಒತ್ತಾಯಿಸಿದ್ದಾರೆ. ಒಂದು ವೇಳೆ ಕಾಮಗಾರಿ ಮುಗಿಸಿಕೊಡದಿದ್ದಲ್ಲಿ ಉಪ್ಪಿನಂಗಡಿಯಿಂದ ಕಲ್ಲಡ್ಕವರೆಗೆ ಗ್ರಾಮಸ್ಥರು, ನಾಗರೀಕರು ಸೇರಿದಂತೆ ಸಾವಿರಾರು ಜನರನ್ನ ಒಗ್ಗೂಡಿಸಿ ಬೃಹತ್ ಹೋರಾಟದ ಎಚ್ಚರಿಕೆಯನ್ನ ರವಾನಿಸಿದ್ದಾರೆ.
ಉಪ್ಪಿನಂಗಡಿಯಿಂದ ಕಲ್ಲಡ್ಕವರೆಗೆ ರಸ್ತೆ ತಡೆದು ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದಾರೆ. ಹಾಗಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೂಡಲೇ ಎಚ್ಚೆತ್ತು ಕಲ್ಲಡ್ಕದಿಂದ ಉಪ್ಪಿನಂಗಡಿವರೆಗಿನ ಪ್ರಮುಖ ಕಾಮಗಾರಿಗಳನ್ನ ಮುಗಿಸಿಕೊಡುವಂತೆ ಕೇಳಿಕೊಂಡಿದ್ದಾರೆ.