.jpg)
BELTHANGADY: ಯುವ ಕಾಂಗ್ರೆಸ್ ರಾಜ್ಯ ಸಮಿತಿ ಕಾರ್ಯದರ್ಶಿಯಾಗಿ ಅಭಿನಂದನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಗುರುರಾಜ್ ಕಿಲ್ಲೂರು
Thursday, February 13, 2025
ಬೆಳ್ತಂಗಡಿ: ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಗುರುರಾಜ್ ಕಿಲ್ಲೂರು ಚುನಾಯಿತರಾಗಿದ್ದಾರೆ. ಈ ಹಿಂದೆ ಇವರು ಬೆಳ್ತಂಗಡಿ ತಾಲೂಕು ಯುವ ಕಾಂಗ್ರೆಸ್ಸಿನ ಕಾರ್ಯದರ್ಶಿಯಾಗಿ ಯಶಸ್ವಿಯಾಗಿ ಸೇವೆ ಸಲ್ಲಿಸಿದ್ದಾರೆ. ಜೊತೆಗೆ ಸಾಮಾಜಿಕ ಹಾಗೂ ಧಾರ್ಮಿಕವಾಗಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ಹಾಗೆಯೇ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯ ಸಮಿತಿಗೆ ನಡೆದ ಚುನಾವಣೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಿಂದ ಅಭಿನಂದನ್ ಹರೀಶ್ ಕುಮಾರ್ ಅವರು ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಇವರು ಈ ಹಿಂದೆ ಬೆಳ್ತಂಗಡಿ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಜಿಲ್ಲಾ ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ.