
PUTTUR: ಈ ಬಾರಿಯೂ ಅನ್ಯಮತೀಯರಿಗಿಲ್ಲ ಅವಕಾಶ!!
ಪುತ್ತೂರು: ಈ ಬಾರಿಯೂ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ವ್ಯಾಪಾರ ವ್ಯವಹಾರಕ್ಕೆ ಅನ್ಯಮತೀಯರಿಗೆ ಅವಕಾಶವಿಲ್ಲ. ಏ.10ರಿಂದ 20ರ ವೆರೆಗೆ ನಡೆಯುವ ಜಾತ್ರೆಯಲ್ಲಿ ಈ ಹಿಂದೆ ಯಾವ ರೀತಿ ಕ್ರಮಕೈಗೊಂಡಿದ್ದಾರೋ ಅದೇ ನಿಯಮದ ಪ್ರಕಾರ ನಾವು ಮುಂದುವರಿಯುತ್ತೇವೆ ಎಂದು ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ನಿರ್ಧಾರಿಸಿದೆ.
ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಹಿಂದೂಪರ ಸಂಘಟನೆಗಳು ಹಿಂದೂ ಧಾರ್ಮಿಕ ಕೇಂದ್ರಗಳಲ್ಲಿ ನಡೆಯುವ ಜಾತ್ರೋತ್ಸವದಲ್ಲಿ ಅನ್ಯಮತೀಯರಿಗೆ ವ್ಯಾಪಾರ ವ್ಯವಹಾರಕ್ಕೆ ಅವಕಾಶ ನೀಡಬಾರದೆಂದು ಒತ್ತಾಯಿಸಿತ್ತು. ಕೊನೆಗೆ ಹಿಂದೂಪರ ಸಂಘಟನೆಗಳ ಒತ್ತಾಯಕ್ಕೆ ಮಣಿದು ಬಿಜೆಪಿ ಸರ್ಕಾರ ಅವಕಾಶ ಕಲ್ಪಿಸಿರಲಿಲ್ಲ. ಕರಾವಳಿ ಜಿಲ್ಲೆಯ ಬಹುತೇಕ ಹಿಂದೂ ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ದೇವಸ್ಥಾನಗಳಲ್ಲಿ ಅನ್ಯಮತೀಯರಿಗೆ ಅವಕಾಶವಿರಲಿಲ್ಲ. ಬಿಜೆಪಿಯ ಈ ನಿರ್ಧಾರಕ್ಕೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿತ್ತು.
ಇದೀಗ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಅನ್ಯಮತೀಯರಿಗೆ ಅವಕಾಶ ಸಿಗಬಹುದೆಂಬ ನಿರೀಕ್ಷೆ ಇತ್ತು. ಆದ್ರೆ ಆ ನಿರೀಕ್ಷೆಯೂ ಹುಸಿಯಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವಾಗ ಹಿಂದೂ ಧಾರ್ಮಿಕ ಜಾತ್ರೋತ್ಸವಗಳಲ್ಲಿ ಅನ್ಯಮತೀಯರಿಗೆ ವ್ಯಾಪಾರ ವ್ಯವಹಾರಕ್ಕೆ ಅವಕಾಶ ಸಿಗಬಹುದು ಎಂಬ ನಿರೀಕ್ಷೆ ಇತ್ತು. ಇದೀಗ ಆ ಎಲ್ಲಾ ನಿರೀಕ್ಷೆಗಳೆಲ್ಲ ಹುಸಿಯಾಗಿದೆ.
ಇನ್ನು ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ನಿರ್ಧಾರವನ್ನ ಹಿಂದೂಪರ ಸಂಘಟನೆಗಳು ಸ್ವಾಗತಿಸಿದೆ.