-->
PUTTUR: ಪುತ್ತೂರು ಕೋಟಿ-ಚೆನ್ನೆಯ ಕಂಬಳಕ್ಕೆ ಅದ್ಧೂರಿ ಚಾಲನೆ...

PUTTUR: ಪುತ್ತೂರು ಕೋಟಿ-ಚೆನ್ನೆಯ ಕಂಬಳಕ್ಕೆ ಅದ್ಧೂರಿ ಚಾಲನೆ...


ಪುತ್ತೂರು:ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಶುಭಾಶೀರ್ವಾದದೊಂದಿಗೆ ಮಾಜಿ ಸಚಿವ ವಿನಯ ಕುಮಾರ್ ಸೊರಕೆಯವರ ಗೌರವಾಧ್ಯಕ್ಷತೆಯಲ್ಲಿ ಶಾಸಕ ಅಶೋಕ್‌ ಕುಮಾರ್ ರೈ ಕೆ ಎಸ್ ಅವರ ಗೌರವ ಸಂಚಾಲಕತ್ವದಲ್ಲಿ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿರವರ ಗೌರವ ಉಪಸ್ಥಿತಿಯಲ್ಲಿ ಇತಿಹಾಸ ಪ್ರಸಿದ್ಧ ತುಳುನಾಡ ಜಾನಪದ ಕ್ರೀಡೆಗಳಲ್ಲೊಂದಾದ ಪುತ್ತೂರು ಕೋಟಿ- ಚೆನ್ನಯ ಜೋಡುಕರೆ ಕಂಬಳಕ್ಕೆ ಇಂದು ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಅದ್ದೂರಿಯಾಗಿ ಚಾಲನೆ ನೀಡಲಾಯಿತು.


32ನೇ ವರ್ಷದ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ ಚಾಲನೆ ದೊರಕಿತು. ಕಂಬಳದ ಉದ್ಘಾಟನೆಯನ್ನು ಶ್ರೀಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ, ಸಮಿತಿಯ ಕೋಶಾಧಿಕಾರಿ ಈಶ್ವರ ಭಟ್ ಪಂಜಿಗುಡ್ಡೆಯವರು ನೆರವೇರಿಸಿದರು. 

ಅಧ್ಯಕ್ಷತೆ ವಹಿಸಿದ್ದ ಸವಣೂರು ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ ಸೀತಾರಾಮ ರೈ, ತಹಶೀಲ್ದಾರ್ ಪುರಂದರ ಹೆಗ್ಡೆ, ಕೋಟಿ ಚೆನ್ನಯ ಕಂಬಳ ಸಮಿತಿ ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ, ಸಂಚಾಲಕ ವಸಂತ ಕುಮಾರ್ ರೈ ದುಗ್ಗಳ, ಪ್ರಧಾನ ಕಾರ್ಯದರ್ಶಿ ದಿನೇಶ್ ಕುಲಾಲ್ ಪಿ. ವಿ.,ಸುಧಾನ ಶಿಕ್ಷಣ ಸಂಸ್ಥೆಯ ವಿಜಯ ಹಾರ್ವಿನ್,ಸಂಜೀವ ಪೂಜಾರಿ ಕುರೆಲು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಪ್ರಸಾದ್ ಆಳ್ವ, ಶಿವರಾಮ ಆಳ್ವ, ರೋಶನ್ ರೈ ಬನ್ನೂರು, ಸುದೇಶ್ ಚಿಕ್ಕಪುತ್ತೂರು ಮತ್ತಿತ್ತರರು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article