
MANGALORE: ಅನ್ವರ್ ಮಾಣಿಪ್ಪಾಡಿಗೆ ಜೀವ ಬೆದರಿಕೆ!!
Friday, April 4, 2025
ಮಂಗಳೂರು: ಅಲ್ಪ ಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿಗೆ ಬೆದರಿಕೆಯೊಡ್ಡಿರುವ ಘಟನೆ ನಡೆದಿದೆ. ವಕ್ಫ್ ಕಾಯ್ದೆ ಮಂಡನೆ ಆದ ಬಳಿಕ ಈ ಬೆದರಿಕೆ ಕರೆಗಳು ನಿರಂತರವಾಗಿ ಬರುತ್ತಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಗೆ ಮಾಹಿತಿ ನೀಡಿದ್ದಾರೆ.
ವಿದೇಶಗಳಿಂದ ನಿರಂತರವಾಗಿ ಕರೆಗಳು ಬರುತ್ತಿದ್ದು, ಜೀವ ಬೆದರಿಕೆಯೊಡ್ಡಿದ್ದಾರೆ ಎನ್ನಲಾಗಿದೆ. ಇಂಟರ್ನೆಟ್ ಕರೆ ಸೇರಿದಂತೆ ದೇಶ ಹಾಗೂ ವಿದೇಶಗಳಿಂದ ಜೀವ ಬೆದರಿಕೆಯ ಕರೆಗಳು ಬರುತ್ತಿದ್ದು ರಕ್ಷಣೆ ಕೊಡುವಂತೆ ಪೊಲೀಸರಲ್ಲಿ ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಸದ್ಯ ಮಂಗಳೂರಿನ ನಿವಾಸದಲ್ಲಿ ವಾಸವಾಗಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.