
PUTTUR: PSI ಮಗನಿಂದ ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ!!
Monday, April 7, 2025
17 ವರ್ಷದ ಕಾಲೇಜು ವಿದ್ಯಾರ್ಥಿನಿ ಮನೆಯಲ್ಲಿ ಒಬ್ಬಳೇ ಇದ್ದಾಗ ನೀರು ಕೇಳೋ ನೆಪದಲ್ಲಿ ಮಂಜುನಾಥ್ ಎಂಬಾತ ಮನೆಗೆ ಹೋಗಿ ಅತ್ಯಾಚಾರವೆಸಗಿದ್ದಾನೆ ಎಂದು ಮಾಹಿತಿ ತಿಳಿದುಬಂದಿದೆ. ಬಳಿಕ ಬಾಲಕಿಗೆ ಬೆದರಿಸಿ ಏಳೆಂಟು ಬಾರಿ ನಿರಂತರ ಅತ್ಯಾಚಾರವೆಸಗಿದ್ದು, ಬಾಲಕಿ ಗರ್ಭಿಣಿ ಆದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಬಿಎನ್ ಎಸ್ ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿ ಮಂಜುನಾಥ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಈ ಆರೋಪಿ ಮಂಜುನಾಥ್ ಎಂಬಾತ ದಕ್ಷಿಣ ಕನ್ನಡ ಜಿಲ್ಲೆಯ ಪಿಎಸ್ ಐ ಓರ್ವರ ಮಗ ಎಂದು ತಿಳಿದುಬಂದಿದೆ.